ಬುಧವಾರ, ಮೇ 12, 2021
19 °C

ಈಜಲು ಹೋದ ವಿದ್ಯಾರ್ಥಿಗಳ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಾ: ಕೆರೆ ಗುಂಡಿಯಲ್ಲಿ ಈಜಲು ಹೋದ ವಿದ್ಯಾರ್ಥಿಗಳಿಬ್ಬರು ಆಕಸ್ಮಿಕವಾಗಿ ಮುಳುಗಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಬೇವಿನಹಳ್ಳಿಯಲ್ಲಿ ಬುಧವಾರ ನಡೆದಿದೆ.ಸುಭಾಷ್ (15), ಜಯಕುಮಾರ್ (15) ಮೃತಪಟ್ಟ ವಿದ್ಯಾರ್ಥಿಗಳು. ಒಂಬತ್ತನೇ ತರಗತಿ ತೇರ್ಗಡೆಯಾಗಿ ಎಸ್‌ಎಸ್‌ಎಲ್‌ಸಿಗೆ ಕಾಲಿರಿಸಿದ್ದರು. ಬುಧವಾರ ಮಧ್ಯಾಹ್ನ ಕೆರೆ ಗುಂಡಿಯಲ್ಲಿ ನಿಂತಿದ್ದ ನೀರಿನಲ್ಲಿ ಈಜಲು ಹೋಗಿದ್ದರು. ಈ ವೇಳೆ ಸುಭಾಷ್ ಆಯತಪ್ಪಿ ನೀರಿನಲ್ಲಿ ಮುಳುಗಿದ.

 

ಆಗ ವಿಜಯ್‌ಕುಮಾರ್ ಆತನ ರಕ್ಷಣೆಗೆ ಮುಂದಾದಾಗ ಆತನ ಸಾವಿಗೂ ಕಾರಣವಾಯಿತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ತಾವರೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.