ಗುರುವಾರ , ಜೂನ್ 24, 2021
29 °C
ಹೈಕೋರ್ಟ್

ಈಜಿಪುರ ವಸತಿ ಸಮುಚ್ಚಯ ಮಾಹಿತಿಗೆ ಹೈಕೋರ್ಟ್ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಈಜಿಪುರದಲ್ಲಿ ನಿರ್ಮಾಣ ವಾಗುತ್ತಿರುವ ವಸತಿ ಸಮುಚ್ಚಯದಲ್ಲಿ (ಇಡಬ್ಲ್ಯುಎಸ್‌ ಕ್ವಾಟ್ರಸ್‌) 300 ಮಂದಿಗೆ ವಸತಿ ಕಲ್ಪಿಸಲು ಸಾಧ್ಯವೇ ಎಂಬುದನ್ನು ಪರಿಶೀಲಿಸಿ ಮಾಹಿತಿ ನೀಡುವಂತೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಹೈಕೋರ್ಟ್‌ ಮಂಗಳವಾರ ನಿರ್ದೇಶನ ನೀಡಿದೆ.ಈಜಿಪುರದ 300 ಮಂದಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ಎಚ್‌. ವಘೇಲಾ ಹಾಗೂ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ವಿಭಾ­ಗೀಯ ಪೀಠ ಬಿಬಿ­ಎಂಪಿಗೆ ನಿರ್ದೇಶನ ನೀಡಿ, ವಿಚಾರಣೆಯನ್ನು ಮುಂದೂಡಿದೆ.     ‘ಈಜಿಪುರದಲ್ಲಿ ವಾಸವಿದ್ದ ಶೆಡ್‌ಗಳನ್ನು ತೆರವುಗೊಳಿಸಿದ ನಂತರ ಆ ಸ್ಥಳದಲ್ಲೇ ಬಿಬಿಎಂಪಿ ವಸತಿ ಸಮುಚ್ಚಯವನ್ನು ನಿರ್ಮಿಸುತ್ತಿದ್ದು, ಅದರಲ್ಲಿ ನಮಗೂ ವಸತಿ ಕಲ್ಪಿಸಬೇಕು’ ಎಂದು 300 ಮಂದಿ ಅರ್ಜಿ ಸಲ್ಲಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.