ಶನಿವಾರ, ಮೇ 21, 2022
23 °C

ಈಡೇರಿದ ಬೇಡಿಕೆ: ಅಂಗನವಾಡಿ ನೌಕರರ ಹರ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಕೇಂದ್ರ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗಾಗಿ ಗೌರವಧನವನ್ನು ಹೆಚ್ಚಳ ಮಾಡಿರುವುದು ಹರ್ಷದಾಯಕವಾಗಿದ್ದು ಇದು ಅಂಗನವಾಡಿ ಕಾರ್ಯಕರ್ತೆಯರ ಹೋರಾಟದ ಫಲ’ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘ ಬಣ್ಣಿಸಿದೆ.‘ಭಾರತೀಯ ಅಂಗನವಾಡಿ ಉದ್ಯೋಗಿಗಳ ಒಕ್ಕೂಟದ ನೇತೃತ್ವದಲ್ಲಿ ನವದೆಹಲಿಯಲ್ಲಿ ನಡೆದ ಬೃಹತ್ ಪ್ರತಿಭಟನೆಯ ವೇಳೆ ಕೇಂದ್ರ ಸರ್ಕಾರ ನೌಕರರ ಬೇಡಿಕೆಗಳಿಗೆ ಸಹಾನುಭೂತಿ ವ್ಯಕ್ತಪಡಿಸಿ ಗೌರವಧನ ಹೆಚ್ಚಿಸುವ ಭರವಸೆ ನೀಡಿತ್ತು. ಇದನ್ನು ಅನುಷ್ಠಾನಗೊಳಿಸುವಂತೆ ಸಂಘ ಸತತವಾಗಿ ಕೇಂದ್ರವನ್ನು ಒತ್ತಾಯಿಸುತ್ತಾ ಬಂದಿತ್ತು. ಈಗ ಆ ಬೇಡಿಕೆ ಈಡೇರಿದೆ’ ಎಂದು ಸಂಘದ ಪ್ರಕಟಣೆ ತಿಳಿಸಿದೆ.‘ಇದೇ ವೇಳೆ ರಾಜ್ಯ ಸರ್ಕಾರ ಕೂಡ ನೌಕರರಿಗೆ 500 ರೂಪಾಯಿ ಗೌರವ ಧನ ಹೆಚ್ಚಿಸಿರುವುದು ನೌಕರರ ಆರ್ಥಿಕ ಸಂಕಷ್ಟವನ್ನು ಸ್ವಲ್ಪ ಮಟ್ಟಿಗೆ ಪರಿಹರಿಸಿದೆ’ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ಸೋಮಶೇಖರ್ ಯಾದಗಿರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದೇ ವೇಳೆ ಕಾರ್ಯಕರ್ತೆಯರನ್ನು ಸಿ ಗ್ರೂಪ್ ನೌಕರರನ್ನಾಗಿಯೂ ಹಾಗೂ ಸಹಾಯಕಿಯರನ್ನು ಡಿ ಗ್ರೂಫ್ ನೌಕರರನ್ನಾಗಿಯೂ ಪರಿಗಣಿಸಬೇಕು. ರಾಜ್ಯ ಸರ್ಕಾರವು ಕೊಡುಗೆ ಆಧಾರಿತ ಪಿಂಚಣಿ ಬದಲು ಸರ್ಕಾರಿ ಪಿಂಚಣಿ ನೀಡುಬೇಕು’ ಎಂದು ಸಂಘ ಒತ್ತಾಯಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.