ಗುರುವಾರ , ಏಪ್ರಿಲ್ 22, 2021
28 °C

ಈ ಬಾರಿ ಕಷ್ಟ: ಸಚಿವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ದೇಶದಾದ್ಯಂತ ಏಕರೂಪದ ಸಾಮಾನ್ಯ ಪರೀಕ್ಷೆ ನಡೆಸಬೇಕು ಎಂಬ ಸುಪ್ರೀಂಕೋರ್ಟ್ ಆದೇಶವನ್ನು ಪಾಲಿಸಬೇಕಾದ ಜವಾಬ್ದಾರಿ ಕೇಂದ್ರ ಸರ್ಕಾರದ ಮೇಲಿದೆ. ಆದರೆ ಈಗಾಗಲೇ ಪರೀಕ್ಷೆಯ ದಿನಾಂಕ ನಿಗದಿಯಾಗಿರುವುದರಿಂದ ಈ ವರ್ಷ ಜಾರಿ ಮಾಡುವುದು ಕಷ್ಟ ಸಾಧ್ಯ ಎಂದು ವೈದ್ಯಕೀಯ ಶಿಕ್ಷಣ ಸಚಿವ ಎಸ್.ಎ.ರಾಮದಾಸ್ ‘ಪ್ರಜಾವಾಣಿ’ ಗೆ ತಿಳಿಸಿದರು.ಬಹುಶಃ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ. ಅಖಿಲ ಭಾರತ ಮಟ್ಟದಲ್ಲಿ ಏಕರೂಪ ಪ್ರವೇಶ ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದು ಕೇಂದ್ರಕ್ಕೆ ಮನವರಿಕೆಯಾಗಿರುವುದರಿಂದ ಆಯಾ ರಾಜ್ಯಗಳು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಬಹುದು ಎಂದು ಹಿಂದೆಯೇ ಹೇಳಿತ್ತು.ಆ ನಂತರವೇ ರಾಜ್ಯ ಸರ್ಕಾರ ಸಿಇಟಿ ದಿನಾಂಕಗಳನ್ನು ಪ್ರಕಟಿಸಿದೆ. ಶಿಕ್ಷಣವು ಸಮವರ್ತಿ ಪಟ್ಟಿಯಲ್ಲಿ ಬರುವುದರಿಂದ ಕೇಂದ್ರ ಸರ್ಕಾರ ಏಕಪಕ್ಷೀಯವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಲು ಬರುವುದಿಲ್ಲ. ರಾಜ್ಯಗಳಿಗೂ ತೀರ್ಮಾನ ತೆಗೆದುಕೊಳ್ಳುವ ಅಧಿಕಾರವಿದೆ ಎಂಬುದಾಗಿ ಅವರು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.