ಉಂಡೆ ಕೊಬ್ಬರಿ ಖರೀದಿಗೆ ಒತ್ತಾಯ

7

ಉಂಡೆ ಕೊಬ್ಬರಿ ಖರೀದಿಗೆ ಒತ್ತಾಯ

Published:
Updated:

ಬೆಂಗಳೂರು: ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಬೆಲೆ ಸ್ಥಿರೀಕರಣ ಕುರಿತ ಸಚಿವ ಸಂಪುಟದ ಉಪ ಸಮಿತಿ ಜತೆ ಚರ್ಚಿಸಿದ ಬಳಿಕ ಕೊಬ್ಬರಿಗೆ ಬೆಂಬಲ ಬೆಲೆ ಮುಂದುವರಿಸುವ ಕುರಿತು ನಿರ್ಧರಿಸಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಎಸ್.ಕೆ.ಬೆಳ್ಳುಬ್ಬಿ ವಿಧಾನಸಭೆಗೆ ತಿಳಿಸಿದರು.ಜೆಡಿಎಸ್‌ನ ಎಂ.ಟಿ.ಕೃಷ್ಣಪ್ಪ ಅವರ ಪರವಾಗಿ ಕೆ.ಎಂ.ಶಿವಲಿಂಗೇಗೌಡ ಅವರು ಸರ್ಕಾರದ ಗಮನ ಸೆಳೆದು, ಕೊಬ್ಬರಿಗೆ ನೀಡುತ್ತಿರುವ ಬೆಂಬಲ ಬೆಲೆಯನ್ನು ಮುಂದುವರಿಸಬೇಕು ಎಂದು ಆಗ್ರಹಪಡಿಸಿದರು.ಡಿ.ವಿ.ಸದಾನಂದ ಗೌಡ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಪ್ರತಿ ಕ್ವಿಂಟಾಲ್ ಕೊಬ್ಬರಿಗೆ ರೂ 700 ಬೆಂಬಲ ಬೆಲೆ ಘೋಷಣೆ ಮಾಡಿದ್ದರು. ಈಗ ಅದನ್ನು ಸ್ಥಗಿತಗೊಳಿಸಲಾಗಿದೆ ಎಂದು ಅವರು ಸರ್ಕಾರದ ಗಮನ ಸೆಳೆದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry