ಮಂಗಳವಾರ, ಮೇ 11, 2021
28 °C

ಉಗ್ರರಿಂದ 16 ಪೊಲೀಸರ ಅಪಹರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾಬೂಲ್(ಎಎಫ್‌ಪಿ): ಆಫ್ಘಾನಿಸ್ತಾನದ ವಾಯವ್ಯ ಬುಡಕಟ್ಟು ಪ್ರಾಂತ್ಯದ ಬಾದಾ ಖಷನ್ ಪ್ರದೇಶದಲ್ಲಿರುವ ಪೊಲೀಸ್ ಠಾಣೆಯ ಮೇಲೆ ಗುರುವಾರ ತಾಲಿಬಾನ್ ಉಗ್ರರು ನಡೆಸಿದ ದಾಳಿಯಲ್ಲಿ ನಾಲ್ವರು ಅಧಿಕಾರಿಗಳು ಬಲಿಯಾಗಿದ್ದಾರೆ. ಈ ದಾಳಿಯಲ್ಲಿ 16 ಮಂದಿಯನ್ನು ಉಗ್ರರು ಅಪಹರಿಸಿದ್ದಾರೆ.

ಉಗ್ರರ ದಾಳಿಯಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದು, ಮೂವರು ಕಾಣೆಯಾಗಿದ್ದಾರೆ ಎಂದು ಪ್ರಾಂತ್ಯದ ಉಪ ರಾಜ್ಯಪಾಲ  ರೆಹಮಾನ್ ಶಮ್ಷ ಹೇಳಿದ್ದಾರೆ.

ಇದೇ ಪ್ರಥಮ ಬಾರಿಗೆ ಇಷ್ಟೊಂದು ಪ್ರಮಾಣದಲ್ಲಿ ಪೊಲೀಸ್ ಸಿಬ್ಬಂದಿಯನ್ನು ತಾಲಿಬಾನ್ ಉಗ್ರರು ಅಪಹರಿಸಿದ್ದು, ಭಾರಿ ಪ್ರಮಾಣದಲ್ಲಿ ಶಸ್ತ್ರಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ರೆಹಮಾನ್ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.