ಮುಂಬೈ (ಪಿಟಿಐ): ಮುಂಬೈ- ಅಹಮದಾಬಾದ್ ನಡುವೆ ಸಂಚರಿಸುವ ಲಕ್ಸುರಿ ಬಸ್ಗಳ ಮೇಲೆ ಭಯೋತ್ಪಾದಕರು ದಾಳಿ ನಡೆಸುವ ಸಾಧ್ಯತೆ ಇದ್ದು, ಸಂಭಾವ್ಯ ದಾಳಿ ನಡೆಯದಂತೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಈ ರಾಜ್ಯಗಳಿಗೆ ಕೇಂದ್ರ ಬೇಹುಗಾರಿಕಾ ಸಂಸ್ಥೆ ಮಾಹಿತಿ ರವಾನಿಸಿದೆ.

`ಎಲ್ಲ ಬಸ್ ಮಾಲೀಕರು ಎಚ್ಚರ ವಹಿಸುವಂತೆ ಸೂಚಿಸಲಾಗಿದೆ~ ಎಂದು ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಯಾಣಿಕರ ಗುರುತು ಖಚಿತಪಡಿಸಿಕೊಳ್ಳಬೇಕು. ಮತ್ತು ಸಾಮಾನುಗಳನ್ನು ಕೂಲಂಕಷವಾಗಿ ತಪಾಸಣೆ ಮಾಡುವಂತೆ ತಿಳಿಸಲಾಗಿದೆ. ಇದಲ್ಲದೇ ಈ ಎರಡು ಮಹಾನಗರಗಳ ಮಧ್ಯೆ ಸಂಚರಿಸುವ ಬಸ್ಗಳನ್ನು ಕಡ್ಡಾಯವಾಗಿ ಪರೀಕ್ಷಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಭಯೋತ್ಪಾದಕರು ಲಘು ವಿಮಾನವನ್ನು ಬಳಸಿಕೊಂಡು ಇಲ್ಲಿನ ಛತ್ರಪತಿ ಶಿವಾಜಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಇತ್ತೀಚೆಗೆ ಕೇಂದ್ರ ಬೇಹುಗಾರಿಕಾ ಸಂಸ್ಥೆ ಎಚ್ಚರಿಕೆ ನೀಡಿದ್ದ ನಂತರ ವ್ಯಾಪಕ ಬಿಗಿ ಭದ್ರತೆ ಕಲ್ಪಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.