ಭಾನುವಾರ, ಮೇ 9, 2021
17 °C

ಉಚಿತ ಆರೋಗ್ಯ ತಪಾಸಣಾ ಶಿಬಿರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ಬಿಬಿಎಂಪಿಯು ಮಹದೇವಪುರ ವಲಯ ಮತ್ತು ಕೆ.ಆರ್.ಪುರ ಉಪ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸುಮಾರು 2,500 ಗುತ್ತಿಗೆ ಪೌರ ಕಾರ್ಮಿಕರು ಹಾಗೂ ಶಾಲಾ ಮಕ್ಕಳಿಗೆ ಎರಡು ದಿನಗಳ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಂಡಿದೆ.ಸೆ.17ರಂದು ಮಹದೇವಪುರ ವಲಯ ಕಚೇರಿಯ ವ್ಯಾಪ್ತಿಯ ಸರ್ಕಾರಿ ಪ್ರೌಢ ಶಾಲೆ ಆವರಣದಲ್ಲಿ ಶಿಬಿರವು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ನಡೆಯಲಿದೆ. ವಾರ್ಡ್ ಸಂಖ್ಯೆ 54, 82, 83, 84, 149, 86, 150ರ ವಾಪ್ತಿಯಲ್ಲಿನ ಪೌರ ಕಾರ್ಮಿಕರು ಶಿಬಿರದ ಉಪಯೋಗ ಪಡೆದುಕೊಳ್ಳಬಹುದು.ಇದೇ 18ರಂದು ಕೆ.ಆರ್.ಪುರದ ಸರ್ಕಾರಿ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಶಿಬಿರ ನಡೆಯಲಿದೆ. ವಾರ್ಡ್ ಸಂಖ್ಯೆ 25, 26, 51, 52, 53, 55, 56, 81, 87ರ ವ್ಯಾಪ್ತಿಯ ಪೌರ ಕಾರ್ಮಿಕರು ಮತ್ತು ಶಾಲಾ ಮಕ್ಕಳು ಶಿಬಿರದ ಪ್ರಯೋಜನ ಪಡೆದುಕೊಳ್ಳಬಹುದು.ಶಿಬಿರದಲ್ಲಿ ವೈದೇಹಿ ವೈದ್ಯಕೀಯ ಕಾಲೇಜಿನ ತಜ್ಞರು ಆರೋಗ್ಯ ತಪಾಸಣೆ ನಡೆಸಲಿದ್ದಾರೆ. ಮಧುಮೇಹ, ರಕ್ತದೊತ್ತಡ, ಚರ್ಮ ರೋಗ, ಮೂಳೆ ಹಾಗೂ ಹೃದಯ ಸಂಬಂಧಿ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲಾಗುತ್ತದೆ.

ಡಾ.ಅಗರ್‌ವಾಲ್ ನೇತ್ರ ಆಸ್ಪತ್ರೆ ವೈದ್ಯರು ಕಣ್ಣಿನ ತಪಾಸಣೆ ನಡೆಸುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.