ಮಂಗಳವಾರ, ಏಪ್ರಿಲ್ 13, 2021
23 °C

ಉಚಿತ ಔಷಧಿ ವಿತರಣೆಗೆ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಆರೋಗ್ಯ ಸೇವೆಗಳು ಎಲ್ಲರಿಗೂ ದೊರಕುವ ನಿಟ್ಟಿನಲ್ಲಿ ಅಗತ್ಯ ಔಷಧಿಗಳನ್ನು ಉಚಿತವಾಗಿ ನೀಡುವ ಉದ್ದೇಶವನ್ನು ಸರ್ಕಾರ ಹೊಂದಿದೆ.`ಸಾರ್ವಜನಿಕ ವೈದ್ಯಕೀಯ ಸೇವೆಗಳು ಎಲ್ಲರನ್ನೂ ತಲುಪಲಿ ಎಂಬ ಆಶಯದಿಂದ ಸರ್ಕಾರ ಈ ನಿರ್ಧಾರಕ್ಕೆ ಮುಂದಾಗಿದೆ~ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಗುಲಾಂ ನಬಿ ಆಜಾದ್ ರಾಜ್ಯಸಭೆಯಲ್ಲಿ ಮಂಗಳವಾರ ತಿಳಿಸಿದರು.ಮಾಹಿತಿ ತಂತ್ರಜ್ಞಾನ ಆಧಾರಿತ ನಿರ್ವಹಣಾ ವ್ಯವಸ್ಥೆಯ ಮೂಲಕ ಜಿಲ್ಲಾ ಔಷಧಿ ಮಳಿಗೆಗಳು ಈ ಔಷಧಿಗಳನ್ನು ವಿತರಿಸಲಿದೆ ಎಂದು ಲಿಖಿತ ಉತ್ತರದಲ್ಲಿ ಸಚಿವರು ಹೇಳಿದರು. ಇದಕ್ಕಾಗಿ 2012-13ರ ಬಜೆಟ್‌ನಲ್ಲಿ ಆರಂಭಿಕ ಹಂತವಾಗಿ 100 ಕೋಟಿ ರೂ ಅಗತ್ಯವಿದೆ ಎಂದೂ ಅವರು ತಿಳಿಸಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.