ನವದೆಹಲಿ (ಪಿಟಿಐ): ರಾಷ್ಟ್ರಪತಿಯಾಗಿದ್ದ ಸಂದರ್ಭದಲ್ಲಿ ತಮಗೆ ನೀಡಲಾಗಿದ್ದ ಉಡುಗೊರೆಗಳನ್ನು ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ರಾಷ್ಟ್ರಪತಿ ಭವನಕ್ಕೆ ಹಿಂದಿರುಗಿಸಿದ್ದಾರೆ. ಈ ಉಡುಗೊರೆಗಳನ್ನು ಅವರ ಕುಟುಂಬವು ಮಹಾರಾಷ್ಟ್ರದ ಅಮರಾವತಿಯಲ್ಲಿ ನಡೆಸುತ್ತಿರುವ ಶಾಲೆಯಲ್ಲಿ ಪ್ರದರ್ಶನಕ್ಕೆ ಇರಿಸಲಾಗಿತ್ತು.

‘ಪ್ರತಿಭಾ ದೇವಿಸಿಂಗ್ ಪಾಟೀಲ್ ಅವರು ರಾಷ್ಟ್ರಪತಿ ಆಗಿದ್ದಾಗ 155 ಉಡುಗೊರೆಗಳನ್ನು ಸ್ವೀಕರಿಸಿದ್ದರು. ಇವುಗಳನ್ನು ಅಮರಾವತಿಯ ವಿದ್ಯಾಭಾರತಿ ಶೈಕ್ಷಣಿಕ ಮಂಡಳಿಯು ತಾತ್ಕಾಲಿಕವಾಗಿ ಎರವಲು ಪಡೆದಿದೆ’ ಎಂದು ರಾಷ್ಟ್ರಪತಿ ಭವನವು ಮಾಹಿತಿ ಹಕ್ಕು ಕಾಯ್ದೆಯಡಿಯ (ಆರ್ಟಿಐ) ಅರ್ಜಿಯೊಂದಕ್ಕೆ ಉತ್ತರಿಸಿತ್ತು. ಈ ಉಡುಗೊರೆಗಳನ್ನು ರಾಷ್ಟ್ರಪತಿ ಭವನಕ್ಕೆ ಇತ್ತೀಚೆಗೆ ಹಿಂದಿರುಗಿಸಲಾಗಿದೆ ಎಂದು ಆರ್ಟಿಐ ಕಾರ್ಯಕರ್ತ ಸುಭಾಷ್ ಅಗರ್ವಾಲ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.