ಮಂಗಳವಾರ, ಜೂನ್ 15, 2021
27 °C

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಕೈ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ರಾಜ್ಯದ ಕುತೂಹಲ ಕೆರಳಿಸಿದ್ದ ಉಡುಪಿ- ಚಿಕ್ಕಮಗಳೂರು ಲೋಕಸಭಾ ಉಪ ಚುನಾವಣೆಯಲ್ಲಿ  ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ವಿ. ಸುನಿಲ್ ಕುಮಾರ್ ಅವರನ್ನು ಸುಮಾರು 45,724  ಸಾವಿರ ಮತಗಳಿಂದ ಸೋಲಿಸಿದ್ದಾರೆ.ಬೆಳಿಗ್ಗೆ ಮತ ಎಣಿಕೆ ಆರಂಭದಿಂದಲೂ ಮುನ್ನಡೆಯನ್ನು ಕಾಯ್ದುಕೊಂಡು ಬಂದ ಕಾಂಗ್ರೆಸ್ ಜಯವನ್ನು ದಾಖಲಿಸಿತು.ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡರು ಪ್ರತಿನಿಧಿಸಿದ್ದ ಕ್ಷೇತ್ರ ಎಂಬ ಹಿನ್ನೆಲೆಯಲ್ಲಿ ರಾಜ್ಯದ ಕುತೂಹಲವನ್ನು ಕೆರಳಿಸಿದ್ದ ಈ ಉಪ ಚುನಾವಣೆಯಲ್ಲಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾರರು ಈ ಬಾರಿ ಕಾಂಗ್ರೆಸ್ ಗೆ ತಮ್ಮ ಒಲವನ್ನು ತೋರಿಸಿದ್ದಾರೆ. ಬಿಜೆಪಿಯು ಮುಖಭಂಗವನ್ನು ಅನುಭವಿಸಿದೆ. ಜೆಡಿಎಸ್ ಮೂರನೇ ಸ್ಥಾನಕ್ಕೆ ನೂಕಲ್ಪಟ್ಟಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.