ಉಡುಪಿ: ಪರೀಕ್ಷಾ ಶುಲ್ಕ-ವಿದ್ಯಾರ್ಥಿಗಳ ಪ್ರತಿಭಟನೆ

7

ಉಡುಪಿ: ಪರೀಕ್ಷಾ ಶುಲ್ಕ-ವಿದ್ಯಾರ್ಥಿಗಳ ಪ್ರತಿಭಟನೆ

Published:
Updated:

ಉಡುಪಿ:  ಪ್ರವರ್ಗ 2ಎ, 3ಎ ಮತ್ತು 3ಬಿಗೆ ಸೇರಿದ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ,ಬೋಧನಾ ಶುಲ್ಕ, ಪ್ರಯೋಗಾಲಯ ಶುಲ್ಕವನ್ನು ಸಂಪೂರ್ಣವಾಗಿ ಪಾವತಿ ಮಾಡಬೇಕೆಂದು ರಾಜ್ಯ ಸರ್ಕಾರ ಹೊರಡಿಸುವುದ ಆದೇಶವನ್ನು ಕೂಡಲೇ ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಉಡುಪಿಯಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.ಕಲ್ಸಂಕದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ತಾಲ್ಲೂಕು ಕಚೇರಿ ವರೆಗೂ ಸಾಗಿತು. ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ಸರ್ಕಾರದ ಈ ಆದೇಶದಿಂದಾಗಿ ಆರು ಲಕ್ಷ ವಿದ್ಯಾರ್ಥಿಗಳಿಗೆ ತೊಂದರೆ ಆಗಿದೆ. ವಿದ್ಯಾರ್ಥಿಗಳಿಗೆ ಮಾರಕ ಆಗಿರುವ ಈ ಆದೇಶವನ್ನೂ ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿದರು.ರಾಜ್ಯವು ಬರಗಾಲವನ್ನು ಎದುರಿಸುತ್ತಿದ್ದು ಜನ ಸಾಮಾನ್ಯರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಇಂತಹ ಸನ್ನಿವೇಶದಲ್ಲಿ ಶುಲ್ಕವನ್ನು ಭರಿಸಿ ಎನ್ನುವುದು ಸರಿಯಲ್ಲ. ಫೋಷಕರು ಶುಲ್ಕ ಭರಿಸಲಾಗದಂತಹ ಸ್ಥಿತಿಯಲ್ಲಿದ್ದಾರೆ. ಈ ಆದೇಶದಿಂದ ಹಿಂದುಳಿಗ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ. ಆದ್ದರಿಂದ ಸರ್ಕಾರ ಈ ಬಗ್ಗೆ ಗಂಭೀವಾಗಿ ಚಿಂತನೆ ಮಾಡಿ. ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಎಬಿವಿಪಿ ಸಂಘಟನಾ ಕಾರ್ಯದರ್ಶಿ ಶಿವಕುಮಾರ್ ಹೇಳಿದರು.ಹಿಂದುಳಿಗ ವರ್ಗಗಳ ವಿದ್ಯಾರ್ಥಿ ವಸತಿ ನಿಲಯಗಳ ಸಂಖ್ಯೆ ರಾಜ್ಯದಲ್ಲಿ ಕಡಿಮೆ ಇವೆ. ಇದರಿಂದಾಗಿ ಬಡ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡದಂತಹ ಸ್ಥಿತಿ ನಿರ್ಮಾಣವಾಗಿದೆ. ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲು ಆಂಧ್ರಪ್ರದೇಶದಲ್ಲಿ ಬಿಸಿಎಂ ನೀತಿ ಜಾರಿಗೆ ತರಲಾಗಿದೆ. ಇದೇ ರೀತಿ ರಾಜ್ಯದಲ್ಲಿ ಸಹ ಬಿಸಿಎಂ ನೀತಿ ಜಾರಿಗೆ ತರಬೇಕು. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಅವರು ಆಗ್ರಹಿಸಿದರು.ಪದವಿ ಪೂರ್ವದಿಂದ ಹಿಡಿದು ಸ್ನಾತಕೋತ್ತರದ ವರೆಗೆ ಬರುವ ಎಲ್ಲ ಇಲಾಖೆಗಳು ಮತ್ತು ವಿಶ್ವವಿದ್ಯಾಲಯಗಳ ಸಚಿವ ಮತ್ತು ಅಧಿಕಾರಿಗಳ ಸಮಿತಿ ರಚಿಸಿ ವಿದ್ಯಾರ್ಥಿಗಳು ಕಟ್ಟಬೇಕಾದ ಶುಲ್ಕವನ್ನು ನಿಗದಿ ಮಾಡಬೇಕು.ರಾಜ್ಯದಲ್ಲಿ ಹಲವು ಕೋರ್ಸ್‌ಗಳನ್ನು ಆರಂಭಿಸಲಾಗಿದೆ. ಇದಕ್ಕೆ ಅನುಗುಣವಾಗಿ ವಿದ್ಯಾರ್ಥಿ ನಿಲಯಗಳನ್ನೂ ಪ್ರಾರಂಭಿಸಬೇಕು. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅಧಿಕ ಶುಲ್ಕ ವಸೂಲಿ ಮಾಡುತ್ತಿರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು

ಎಬಿವಿಪಿ ನಗರ ಕಾರ್ಯದರ್ಶಿ ಅಭಿಷೇಕ್ ಜೈನ್, ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry