ಸೋಮವಾರ, ಜನವರಿ 27, 2020
25 °C

ಉಡ ಮಾರುತ್ತಿದ್ದವರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಹೊರ ವಲಯದ ಅತ್ತಿಬೆಲೆ ಬಳಿ ಭಾನುವಾರ ಉಡಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿ­ಗಳನ್ನು ಬಂಧಿಸಿರುವ ಸಿಐಡಿ ಅರಣ್ಯ ಘಟಕದ ಪೊಲೀಸರು ಮೂರು ಉಡಗಳನ್ನು ವಶಪಡಿಸಿಕೊಂಡಿದ್ದಾರೆ.ತಮಿಳುನಾಡು ಮೂಲದ ಸಾಥಿ ಮತ್ತು ಪಳನಿ ಬಂಧಿತರು. ಆರೋಪಿ­ಗಳಿಂದ ರಕ್ಷಿಸಿರುವ ಉಡಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳ ವಶಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಉಡಗಳನ್ನು ತಮಿಳುನಾಡಿನ ಅರಣ್ಯ ಪ್ರದೇಶದಲ್ಲಿ ಹಿಡಿದುಕೊಂಡು ಬಂದಿದ್ದಾಗಿ ಬಂಧಿತರು ವಿಚಾರಣೆ ವೇಳೆ ತಿಳಿಸಿದ್ದಾರೆ. ಅವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.ಉಡದ ಮಾಂಸ ಸೇವನೆಯಿಂದ ದೇಹಕ್ಕೆ ಹೆಚ್ಚಿನ ಶಕ್ತಿ ಸಿಗುತ್ತದೆ. ಉಡದ ಎಣ್ಣೆಯನ್ನು ಕೀಲು ನೋವಿಗೆ ಔಷಧಿಯಾಗಿ ಮತ್ತು ವಯಾಗ್ರ ಮಾತ್ರೆಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರತಿಕ್ರಿಯಿಸಿ (+)