ಭಾನುವಾರ, ಜೂನ್ 20, 2021
24 °C

ಉತ್ತಮ ಆರೋಗ್ಯವೇ ನೈಜ ಸಂಪತ್ತು: ಶಾಸಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೇವನಹಳ್ಳಿ:  ಉತ್ತಮ ಆರೋಗ್ಯವೇ ನಿಜವಾದ ಸಂಪತ್ತು ಎಂದು ಶಾಸಕ ಕೆ.ವೆಂಕಟಸ್ವಾಮಿ ಅಭಿಪ್ರಾಯಪಟ್ಟರು.ತಾಲ್ಲೂಕಿನ ಕುಂದಾಣದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಶನಿವಾರ ಏರ್ಪಡಿಸಿದ್ದ ಸಮುದಾಯ ಆರೋಗ್ಯ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಮನೆಯ ಸುತ್ತಲಿನ ಪರಿಸರವನ್ನು ಶುಚಿಯಾಗಿಟ್ಟುಕೊಳ್ಳಬೇಕು.  ನೈರ್ಮಲ್ಯ ಹಾಗೂ ಪರಿಸರವನ್ನು ರಕ್ಷಿಸಬೇಕು. ಗ್ರಾಮೀಣರ ಆರೋಗ್ಯ ಮತ್ತು ಪ್ರಸೂತಿ ಸಮಸ್ಯೆ ಅರಿತು ಪ್ರಸ್ತುತ ವರ್ಷ ತಾಲ್ಲೂಕಿನಲ್ಲಿ ಮೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಆರಂಭವಾಗಿದೆ ಎಂದರು.ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಡಾ. ವಿಶ್ವಜಿತ್ ನಾಯ್ಕ ಮಾತನಾಡಿ, ಇಲಾಖೆ ಯೋಜನೆಗಳ ಜಾರಿಗೆ ಸಮುದಾಯದ ಸಹಭಾಗಿತ್ವ ಅವಶ್ಯಕ. ಮಾರಕ ರೋಗಗಳ ಬಗ್ಗೆ ಎಚ್ಚರಿಕೆ ಅಗತ್ಯ. ಆರೋಗ್ಯ ಇಲಾಖೆ ಶೇ. 90ರಷ್ಟು ಸೌಲಭ್ಯಗಳ ಬಗ್ಗೆ ಸಾಮಾನ್ಯ ಜನರಿಗೆ ತಿಳಿವಳಿಕೆ ಇಲ್ಲ. ಆರೋಗ್ಯ ಕೇಂದ್ರದಲ್ಲಿ 24 ಗಂಟೆಗಳ ಪ್ರಸೂತಿ ಸೇವೆ, ಗರ್ಭಿಣಿಯರಿಗೆ ರಕ್ತ ಪರೀಕ್ಷೆ ಸೇರಿದಂತೆ ವಿವಿಧ ಸೌಕರ್ಯವಿದೆ. ಆದರೆ ಸಿಬ್ಬಂದಿಗೆ ವಸತಿ ಗೃಹದ ಅವಶ್ಯಕತೆ ಇದೆ ಎಂದರು.ಗ್ರಾ.ಪಂ ಅಧ್ಯಕ್ಷ ಎನ್.ಟಿ.ನಾಗೇಶ್ ಮಾತನಾಡಿ, ಗುಣಮಟ್ಟದ ಸುಸಜ್ಜಿತ ಕಟ್ಟಡದಲ್ಲಿ ಆಸ್ಪತ್ರೆ ಆರಂಭಿಸಿದ್ದರೂ ಸಾರಿಗೆ ಅವ್ಯವಸ್ಥೆಯಿಂದಾಗಿ ರೋಗಗಳಿಗೆ ತೊಂದರೆಯಾಗಿದೆ. ಆದ್ದರಿಂದ ಬಸ್ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.ಜಿ.ಪಂ. ಮಾಜಿ ಸದಸ್ಯ ಪಿಳ್ಳಮುನಿಶ್ಯಾಮಪ್ಪ,  ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಬಾಲಸುಬ್ರಮಣಿ ಮಾತನಾಡಿದರು.  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಜಗನ್ನಾಥ್, ಗ್ರಾ.ಪಂ.ಉಪಾಧ್ಯಕ್ಷೆ ಕವಿತಾ,  ಬಾಲಕೃಷ್ಣ, ಕಾಂಗ್ರೆಸ್ ಮುಖಂಡ ಬಿ.ವಿ.ಸ್ವಾಮಿ, ಗ್ರಾ.ಪಂ.ಸದಸ್ಯ ಚಂದ್ರು, ಅಕ್ಕಯಮ್ಮ ಇತರರು ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.