ಭಾನುವಾರ, ಜೂಲೈ 5, 2020
22 °C

ಉತ್ತಮ ಪರೀಕ್ಷಾ ಫಲಿತಾಂಶಕ್ಕೆ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀನಿವಾಸಪುರ: ಶಿಕ್ಷಕರು ಮತ್ತು ಪೋಷಕರು ಸಮನ್ವಯತೆಯಿಂದ ಮಕ್ಕಳ ಬಗ್ಗೆ ಕಾಳಜಿ ವಹಿಸಿದಾಗ ಮಾತ್ರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ತಂದುಕೊಡಲು ಸಾಧ್ಯ ಎಂದು ಶಿಕ್ಷಣಾಧಿಕಾರಿ ಎ.ನಾಗೇಂದ್ರ ಪ್ರಸಾದ್ ಹೇಳಿದರು.ಸುಗಟೂರಿನ ಸಬರಮತಿ ಪ್ರೌಢ ಶಾಲೆಯಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಪೋಷಕರ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದರು.ಜಿಲ್ಲೆಯ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು 30 ನೇ ಸ್ಥಾನದಿಂದ ಮೇಲೆತ್ತಲು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಹಲವು ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗಿದೆ.ಈಗಾಗಲೆ ಎಲ್ಲ ವಿಷಯಗಳ ಪ್ರಶ್ನೆ ಕೋಠಿಯನ್ನು ಸಿದ್ಧಪಡಿಸಿ ಎಲ್ಲ ಶಾಲೆಗಳಿಗೂ ವಿತರಿಸಲಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಸಿದ್ಧರಾಗಲು ಪೂರಕವಾಗಿ ಪ್ರಶ್ನೆ ಪತ್ರಿಕೆಗಳನ್ನು ಅಂತರ್ಜಾಲದಲ್ಲಿ ಇಡಲಾಗಿದೆ. ವಿದ್ಯಾರ್ಥಿಗಳು ಅದರ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಹೇಳಿದರು.  ಗ್ರಾಮೀಣ ಪ್ರದೇಶದ ಪೋಷಕರು ತಮ್ಮ ಮಕ್ಕಳಿಗೆ ಓದಲು ಅವಕಾಶ ಮಾಡಿಕೊಡಬೇಕು. ಅವರು ಓದುವುದನ್ನು ಗಮನಿಸಬೇಕು. ಗುಣಾತ್ಮಕ ಫಲಿತಾಂಶ ಬರಲು ಸಹಕರಿಸಬೇಕು ಎಂದು ಮನವಿ ಮಾಡಿದರು.  ವಿಷಯ ತನಿಖಾಧಿಕಾರಿ ಅಶೋಕ್ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಶಿಕ್ಷಕರು ಮತ್ತು ಪೋಷಕರು ಮಕ್ಕಳ ಮೇಲೆ ಹೆಚ್ಚಿನ ಒತ್ತಡ ಹಾಕದೆ ಸರಾಗ ಕಲಿಕೆಗೆ ಅವಕಾಶ ಮಾಡಿಕೊಡಬೇಕು. ಮಕ್ಕಳ ಭವಿಷ್ಯ ಉತ್ತಮಗೊಳ್ಳುವಂತೆ ನೊಡಿಕೊಳ್ಳಬೇಕು. ಕಲಿಕೆಯಲ್ಲಿ ಶಿಕ್ಷಕರಿಗೆ ಇರುವಷ್ಟೇ ಹೊಣೆಗಾರಿಕೆ ಪೋಷಕರಿಗೂ ಇದೆ. ಮಕ್ಕಳ ಓದಿಗೆ ಒತ್ತು ನೀಡುವುದರ ಜೊತೆಗೆ ಅವರು ಉತ್ತಮ ಪ್ರಜೆಗಳಾಗುವಂತೆ ಎಚ್ಚರ ವಹಿಸಬೇಕು. ಮಕ್ಕಳು ಓದಿ ವಿದೇಶಗಳಿಗೆ ಹೋಗಿ ತಂದೆ ತಾಯಿಯನ್ನು ವೃದ್ಧಾಶ್ರಮಕ್ಕೆ ದೂಡುವ ಪರಿಸ್ಥಿತಿ ಬರದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.  ವಿಷಯ ತನಿಖಾಧಿಕಾರಿ ವೆಂಕಟಸ್ವಾಮಿ ಮಾತನಾಡಿ, ಎಸ್‌ಎಸ್‌ಎಸ್‌ಸಿ ಒಂದು ಪ್ರಮುಖವಾದ ಘಟ್ಟವಾಗಿದ್ದು, ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದು ಮುಂದುವರೆಯಬೇಕು. ಅದಕ್ಕೆ ಪೂರಕವಾಗಿ ಅಭ್ಯಾಸ ಮಾಡಬೇಕು. ಗುಣಾತ್ಮಕ ಫಲಿತಾಂಶವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.ಮುಖ್ಯ ಶಿಕ್ಷಕ ವಿ.ಬೈರಪ್ಪ, ಹಿರಿಯ ದೈಹಿಕ ಶಿಕ್ಷಕ ಬಿ.ವೆಂಕಟೇಶ್ ಮತ್ತಿತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.ಶಿಕ್ಷಕರಾದ ಪಿ.ಬಾಲಕೃಷ್ಣಪ್ಪ ಸ್ವಾಗತಿಸಿದರು. ವೆಂಕಟೇಶ್ ವಂದಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.