ಉತ್ತಮ ಪುಸ್ತಕ ಒಳ್ಳೆಯ ಸ್ನೇಹಿತನಿದ್ದಂತೆ
ಸೊರಬ: ವಿದ್ಯಾರ್ಥಿಗಳ ಹಾಗೂ ಶಿಕ್ಷಕರ ಬೌದ್ಧಿಕಮಟ್ಟವನ್ನು ಹೆಚ್ಚಿಸಲು ಸರ್ಕಾರದಿಂದ ಹಮ್ಮಿಕೊಂಡಿರುವ `ತೆಗೆಯಿರಿ ಪುಸ್ತಕ ಹೊರಗೆ, ಹಚ್ಚಿರಿ ಜ್ಞಾನದ ದೀವಿಗೆ~ ಕಾರ್ಯಕ್ರಮ ಸಹಕಾರಿಯಾಗಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹಾಲಾನಾಯ್ಕ ಹೇಳಿದರು.
ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ `ತೆಗೆಯಿರಿ ಪುಸ್ತಕ ಹೊರಗೆ, ಹಚ್ಚಿರಿ ಜ್ಞಾನದ ದೀವಿಗೆ~ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪುಸ್ತಕಗಳು ಜ್ಞಾನದ ಹೆಬ್ಬಾಗಿಲು ಎಂಬ ನಾಣ್ಣುಡಿಯಂತೆ ಉತ್ತಮ ಪುಸ್ತಕಗಳ ಓದುವಿಕೆ ಒಳ್ಳೆಯ ಸ್ನೇಹಿತನಂತೆ ಸಹಕರಿಸುತ್ತದೆ. ಅದರ ಉದ್ದೇಶವನ್ನರಿತು ನಡೆದುಕೊಂಡಾಗ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು ಎಂದರು.
ಎಸ್ಡಿಎಂಸಿ ಸದಸ್ಯ ಕೃಷ್ಣ ಗುಡಿಗಾರ್ ಕಾರ್ಯಕ್ರಮ ಉದ್ಘಾಟಿಸಿದರು. ಶೇಖರ್ ಭಂಡಾರಿ ಶಾಲಾ ಶ್ರದ್ಧಾ ವಾಚನಾಲಯ ಉದ್ಘಾಟಿಸಿದರು. ಕೆ.ಪಿ. ಶೈಲಜಾ ಅಧ್ಯಕ್ಷತೆ ವಹಿಸಿದ್ದರು. ಕೆ.ಬಿ. ಚಂದ್ರಶೇಖರ್, ಪಿ. ಶಾಂತಾ, ಶಂಕರಗೌಡ ಹಾಗೂ ಶಿಕ್ಷಕರು ಹಾಜರಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.