ಬುಧವಾರ, ಮೇ 12, 2021
24 °C

ಉತ್ತಮ ಭವಿಷ್ಯ ರೂಪಿಸಿಕೊಳ್ಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: `ಸರ್ಕಾರಿ ಶಾಲಾ ಮಕ್ಕಳು ಖಾಸಗಿ ಶಾಲೆಯ ವಿದ್ಯಾರ್ಥಿ ಗಳೊಟ್ಟಿಗೆ ಪೈಪೋಟಿ ನಡೆಸಿ ಉತ್ತಮ ಫಲಿತಾಂಶ ಪಡೆಯುವ ವಾತಾವರಣ ಸೃಷ್ಟಿಸಲು ಅಗತ್ಯ ಕ್ರಮಕೈಗೊಳ್ಳಲಾಗುವುದು~ ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ತಿಳಿಸಿದರು.ತಾಲ್ಲೂಕಿನ ಕೋಡಿಉಗನೆ ಗ್ರಾಮದಲ್ಲಿ ಈಚೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಿಸಿ ಅವರು ಮಾತನಾಡಿದರು.ತಾಲ್ಲೂಕಿನಲ್ಲಿ ಸರ್ಕಾರಿ ಶಾಲೆಗಳೇ ಹೆಚ್ಚಿನ ಸಂಖ್ಯೆಯ್ಲ್ಲಲಿವೆ. ಅಲ್ಲಿನ ವಿದ್ಯಾರ್ಥಿಗಳು ನಗರ ಪ್ರದೇಶದ ವಿದ್ಯಾರ್ಥಿಗಳಂತೆ ವಿದ್ಯಾಭ್ಯಾಸ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಇದೇ ನನ್ನ ಆಶಯ.ಅದಕ್ಕಾಗಿ ಎ್ಲ್ಲಲ ರೀತಿಯ ಕ್ರಮಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಕೋಡಿಉಗನೆ ಗ್ರಾಮದಲ್ಲಿ ಪೋಷಕರು ಮತ್ತು ಶಾಲಾಭಿವೃದ್ಧಿ ಸಮಿತಿಯಿಂದ ಸ್ವಂತ ಖರ್ಚಿನಲ್ಲಿ ಮಕ್ಕಳಿಗೆ ಸಮವಸ್ತ್ರ ನೀಡುತ್ತಿದ್ದಾರೆ. ಇದು ಇತರೇ ಶಾಲೆಗಳಿಗೆ ಆದರ್ಶಪ್ರಾಯವಾದ ಕಾರ್ಯಕ್ರಮ ಎಂದರು.ತಾ.ಪಂ. ಮಾಜಿ ಅಧ್ಯಕ್ಷ ಬಿ.ಕೆ. ರವಿಕುಮಾರ್ ಮಾತನಾಡಿ, ಸರ್ಕಾರಿ ಶಾಲೆಗಳ ಬಗ್ಗೆ ಪೋಷಕರು ಅನಾದಾರ ತಳೆಯಬಾರದು. ಮಕ್ಕಳನ್ನು ಶಾಲೆಗೆ ಕಳುಹಿಸಿ ಅವರ ಉಜ್ಜಲ ಭವಿಷ್ಯ ರೂಪಿಸಬೇಕು ಎಂದರು.ಮೈಮುಲ್ ನಿರ್ದೇಶಕ ಎಚ್.ಎಸ್. ಬಸವರಾಜು ಮಾತನಾಡಿ, ಸಮವಸ್ತ್ರ ಧರಿಸುವುದರಿಂದ ಮಕ್ಕಳಲ್ಲಿ ಶಿಸ್ತು ಮತ್ತು ಸಂಯಮ ಕಲಿಸಲು ಸಾಧ್ಯ ಎಂದು ನುಡಿದರು.ಕಾರ್ಯಕ್ರಮದಲ್ಲಿ ಎಪಿಎಂಸಿ ಉಪಾಧ್ಯಕ್ಷ ಪುರುಷೋತ್ತಮ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಹದೇವಸ್ವಾಮಿ, ಗ್ರಾ.ಪಂ. ಅಧ್ಯಕ್ಷ ನಂಜೇಂದ್ರ, ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಚನ್ನಂಜಯ್ಯ, ಗ್ರಾ.ಪಂ. ಸದಸ್ಯ ಜಾನ್ಸನ್, ಸುನೀತಾ, ಮಹೇಶ್ವರಿ, ಶಿಕ್ಷಣಾಧಿಕಾರಿ ಪ್ರಭಾಕರ್, ಮುಖ್ಯಶಿಕ್ಷಕ ರಂಗನಾಥ್ ಇತರರು ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.