ಗುರುವಾರ , ಮೇ 6, 2021
33 °C

ಉತ್ತಮ ರಸ್ತೆಗಳ ನಿರ್ಮಾಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ರಾಜ್ಯದ ಹೆದ್ದಾರಿ ಮತ್ತು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಗಳನ್ನು ಅಭಿವೃದ್ದಿಪಡಿಸಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದ್ದು, ಹಂತಹಂತವಾಗಿ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುವುದು. ಉತ್ತಮ ಮಾದರಿಯ ರಸ್ತೆಗಳನ್ನು ನಿರ್ಮಿಸ ಲಾಗುವುದು ಎಂದು ಲೋಕೋಪ ಯೋಗಿ ಸಚಿವ ಸಿ.ಎಂ.ಉದಾಸಿ ತಿಳಿಸಿದರು.ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರನ್ನು ಭೇಟಿಯಾದ ಅವರು, `ರಸ್ತೆಗಳ ಉನ್ನತೀಕರಣ, ಸಮೀಕರಣ ಮತ್ತು ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ಹಂತಹಂತ ವಾಗಿ ಕಾಮಗಾರಿಗೆ ಚಾಲನೆ ನೀಡಲಾ ಗುತ್ತಿದೆ~ ಎಂದು ತಿಳಿಸಿದರು.`ಮುಂದಿನ ಎರಡು ವರ್ಷಗಳಲ್ಲಿ ಎಲ್ಲ ಕಾಮಗಾರಿಗಳು ಪೂರ್ಣಗೊಳ್ಳಲಿದ್ದು, ಅತ್ಯುತ್ತಮ ರಸ್ತೆಗಳು ನಿರ್ಮಾಣಗೊಳ್ಳಲಿವೆ ಎಂದರು.ಇದಕ್ಕೂ ಮುನ್ನ ಬಿಜೆಪಿ ಮುಖಂಡರೊಡನೆ ಮಾತುಕತೆ ನಡೆಸಿದ ಅವರು, ಜಿಲ್ಲೆಯಲ್ಲಿನ ಹದಗೆಟ್ಟ ರಸ್ತೆಗಳು ಮತ್ತು ಇತರ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರು. ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯೊಂದಿಗೆ ಚರ್ಚಿಸುತ್ತೇನೆ  ಎಂದು ಭರವಸೆ ನೀಡಿದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರವಿ ನಾರಾಯಣರೆಡ್ಡಿ, ತಾಲ್ಲೂಕು ಘಟಕದ ಅಧ್ಯಕ್ಷ ಚಿಕ್ಕಪ್ಪನಹಳ್ಳಿ ನಾರಾಯಣಸ್ವಾಮಿ, ಮುಖಂಡರಾದ ಎ.ವಿ.ಬೈರೇಗೌಡ, ಆಂಜನೇಯರೆಡ್ಡಿ, ಗೋಕುಲ್ ನಂಜಪ್ಪ, ಪ್ರೇಮಲೀಲಾ ವೆಂಕಟೇಶ್, ಕಲಾ ನಾಗರಾಜ ಇತರರು ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.