ಉತ್ತಮ ಶಿಕ್ಷಕರನ್ನು ಗುರುತಿಸಲು ಸಲಹೆ

ಗುರುವಾರ , ಮೇ 23, 2019
27 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ಉತ್ತಮ ಶಿಕ್ಷಕರನ್ನು ಗುರುತಿಸಲು ಸಲಹೆ

Published:
Updated:

ಮಾಲೂರು : ಶಿಕ್ಷಕರು ಪ್ರಾಮಾಣಿಕತೆ ಮತ್ತು ಶ್ರೇಷ್ಠತೆ ಅಂಶಗಳನ್ನು ಅಧ್ಯಯನದಲ್ಲಿ ಅಳವಡಿಸಿಕೊಂಡು ಭೋದಿಸಿದಾಗ  ವಿದ್ಯಾರ್ಥಿಗಳು ಸತ್ಪ್ರಜೆಗಳಾಗಲು ಸಾಧ್ಯ ಎಂದು ಬಾಪೂಜಿ ವಿದ್ಯಾ ಸಂಸ್ಥೆಯ ಗೌರವ ಅಧ್ಯಕ್ಷ ಎಂ.ವಿ. ಹನುಮಂತಯ್ಯ ಅಭಿಪ್ರಾಯ ಪಟ್ಟರು.ಸೋಮವಾರ ಪಟ್ಟಣದ ಹೊರ ವಲಯದ ಬಾಪೂಜಿ  ಡಿಇಡಿ ಕಾಲೇಜಿ ನಲ್ಲಿ ಏರ್ಪಡಿಸಿದ್ದ ಶಿಕ್ಷಕರ ದಿನಾ ಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.ರಾಷ್ಟ್ರದ ಅಭಿವೃದ್ಧಿಗೆ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಇಂದಿನ ಮಕ್ಕಳಿಗೆ ಶಿಕ್ಷಕರು ನೀತಿ ಮತ್ತು ಸನ್ಮಾರ್ಗದ ಬಗ್ಗೆ ಭೋದನೆ ನೀಡಬೇಕಾಗಿದೆ ಎಂದರು.ಇದೇ ಸಂದರ್ಭದಲ್ಲಿ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಮಾಸ್ತಿ ಕೃಷ್ಣಪ್ಪ, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಸಿದ್ದಪ್ಪ, ವೆಂಕಟಸ್ವಾಮಿ, ಹಾಗೂ ಕೆಂಪಯ್ಯ  ಅವರನ್ನು ಸನ್ಮಾನಿಸಲಾಯಿತು. ಪ್ರಶಸ್ತಿ ಸ್ವೀಕರಿಸಿದ ಶಿಕ್ಷಕ ಮಾಸ್ತಿ ಕೃಷ್ಣಪ್ಪ,  ಉತ್ತಮ ಶಿಕ್ಷಕರನ್ನು ಆಯ್ಕೆ ಮಾಡುವ ಕೆಲಸವನ್ನು ಸರ್ಕಾರ ಹಾಗೂ ಸಮಾಜವು ವಹಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ಸಂಸ್ಥೆ ಕಾರ್ಯದರ್ಶಿ ರುದ್ರಪ್ಪ, ನಿರ್ದೇಶಕ ವೆಂಕಟಸ್ವಾಮಿ, ಶಿಕ್ಷಕ ಸಿದ್ದಪ್ಪ, ವೆಂಕಟಸ್ವಾಮಿ, ಕೆಂಪಯ್ಯ, ಬಿಆರ್‌ಸಿ ವಿಜಯಕುಮಾರ್, ಸಿಆರ್‌ಸಿ ಹೊನ್ನಕಟ್ಟಿ, ಮುಖ್ಯ ಶಿಕ್ಷಕ ವೆಂಕಟರಮಣಪ್ಪ ಇದ್ದರು. ಶಿಕ್ಷಕ ಪ್ರಕಾಶ್‌ನಿರೂಪಿಸಿದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry