ಉತ್ತರದಲ್ಲಿ ಪ್ರವಾಹ, ಭೂಕುಸಿತ: 27 ಸಾವು

ಭಾನುವಾರ, ಮೇ 19, 2019
32 °C

ಉತ್ತರದಲ್ಲಿ ಪ್ರವಾಹ, ಭೂಕುಸಿತ: 27 ಸಾವು

Published:
Updated:
ಉತ್ತರದಲ್ಲಿ ಪ್ರವಾಹ, ಭೂಕುಸಿತ: 27 ಸಾವು

ಡೆಹ್ರಾಡೂನ್/ಶಿಮ್ಲಾ/ಜಮ್ಮು (ಪಿಟಿಐ): ದೇಶದ ವಿವಿಧ ಕಡೆ ಭಾರಿ ಮಳೆ ಸುರಿಯುತ್ತಿದ್ದು, ಉತ್ತರಾಖಂಡದಲ್ಲಿ 26 ಹಾಗೂ ಶಿಮ್ಲಾದಲ್ಲಿ ಒಬ್ಬರು ಬಲಿಯಾಗಿದ್ದಾರೆ. ಜಮ್ಮುವಿನಲ್ಲಿ ಪ್ರವಾಹಕ್ಕೆ ಸಿಲುಕಿದ್ದ ಸುಮಾರು 22 ಮಂದಿಯನ್ನು ಶನಿವಾರ ರಕ್ಷಿಸಲಾಗಿದೆ.ಉತ್ತರಾಖಂಡದಲ್ಲಿ 1978ರ ಬಳಿಕ ಇದೇ ಮೊದಲ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ರಸ್ತೆ ಹಾಗೂ ರೈಲು ಸಂಚಾರಕ್ಕೆ ಭಾರಿ ಅಡಚಣೆಯಾಗಿದೆ. ಈ ಭಾಗದಲ್ಲಿ ಇನ್ನೂ ಹೆಚ್ಚಿನ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಗಂಗೋರಿ, ದುಂಢಾ, ಉತ್ತರಕಾಶಿ ಹಾಗೂ ಬರ್ಕೋಟ್ ಪ್ರದೇಶದಲ್ಲಿ ಅನೇಕ ಮಂದಿ ಕಣ್ಮರೆಯಾಗಿದ್ದು, ಇವರ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಉತ್ತರಕಾಶಿ ಜಿಲ್ಲಾಧಿಕಾರಿ ಆರ್.ರಾಜೇಶ್ ಕುಮಾರ್ ಹೇಳಿದ್ದಾರೆ.ಗಂಗೋರಿ ಪ್ರದೇಶದಲ್ಲಿ ಅಗ್ನಿ ಶಾಮಕ ದಳದ ಮೂವರು ಸಿಬ್ಬಂದಿ ಮೃತಪಟ್ಟಿದ್ದಾರೆ. ಪ್ರವಾಹದ ಕಾರಣ ಗಂಗೋತ್ರಿ ಹಾಗೂ ಯಮುನೋತ್ರಿ ಯಾತ್ರೆಯನ್ನು ರದ್ದುಪಡಿಸಲಾಗಿದೆ. ಗಂಗೋರಿಯಲ್ಲಿ ಭಾಗೀರಥಿ ನದಿಯು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದ್ದು, ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಗಂಗೋರಿ ಸೇತುವೆ ಕುಸಿದ ಪರಿಣಾಮ ಸುಮಾರು 30 ಮನೆಗಳು ಕೊಚ್ಚಿಕೊಂಡು ಹೋಗಿವೆ.ಜಮ್ಮು ವರದಿ:
ಸತತ ಮೂರು ವಾರಗಳಿಂದ ಮಳೆಗಾಗಿ ಎದುರು ನೋಡುತ್ತಿದ್ದ ಕಣಿವೆ ರಾಜ್ಯದ ಜನರು ವರುಣನ ಅಟ್ಟಹಾಸ ನೋಡಿ ಬೆಚ್ಚಿ ಬಿದ್ದಿದ್ದಾರೆ. ಶುಕ್ರವಾರ ರಾತ್ರಿ ಇಡೀ ಸುರಿದ ವರ್ಷಧಾರೆಯಿಂದ ಅನೇಕ ಪ್ರದೇಶಗಳು ಜಲಾವೃತಗೊಂಡಿವೆ. ಜಮ್ಮುವಿನ ಅನೇಕ ನದಿಗಳಿಗೆ ಪ್ರವಾಹ ಬಂದಿದ್ದು, ಸುಮಾರು 3 ತಾಸುಗಳ ಕಾರ್ಯಾಚರಣೆ ಬಳಿಕ 22 ಮಂದಿಯನ್ನು ರಕ್ಷಿಸಲಾಗಿದೆ. ಚಿನಾಬ್, ತಾವಿ, ಉಜ್ ಹಾಗೂ ಬಸಂತರ್ ನದಿಗಳು ಅಪಾಯದ ಮಟ್ಟವನ್ನು ತಲುಪುತ್ತಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಭೂಕುಸಿತ-ಸಂಚಾರ ಸ್ಥಗಿತ: ರಂಬನ್ ವಲಯದಲ್ಲಿ ಭೂಕುಸಿತದಿಂದಾಗಿ ಶ್ರೀನಗರ-ಜಮ್ಮು ಹೆದ್ದಾರಿ ಸ್ಥಗಿತಗೊಂಡಿದೆ.ಶಿಮ್ಲಾ ವರದಿ: ಕುಲು ಜಿಲ್ಲೆಯ ಮನಾಲಿಯಲ್ಲಿ ಪ್ರವಾಹಕ್ಕೆ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಪ್ರಮುಖ ಸೇತುವೆಗಳು, ರಸ್ತೆಗಳು ಕೊಚ್ಚಿಕೊಂಡು ಹೋಗಿವೆ. ಭೂಕುಸಿತದಿಂದ ಮನಾಲಿ-ರೊಹ್ಟಾಂಗ್ ಪಾಸ್ ಹೆದ್ದಾರಿ ಸಂಚಾರ ಸ್ಥಗಿತಗೊಂಡಿದೆ.ಫೈಜಾಬಾದ್ ವರದಿ: ಉತ್ತರಪ್ರದೇಶದ ಸರಯೂ, ಘಾಘ್ರಾ ನದಿಗಳು ಉಕ್ಕಿ ಹರಿಯುತ್ತಿದ್ದು, ಬಾರಾಬಂಕಿ ಜಿಲ್ಲೆಯಲ್ಲಿ  ಗ್ರಾಮಗಳು ಜಲಾವೃತಗೊಂಡಿವೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry