ಮಂಗಳವಾರ, ಜೂನ್ 22, 2021
27 °C

ಉತ್ತರಪ್ರದೇಶ: ಇಬ್ಬರು ಸಚಿವರ ವಜಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಖನೌ (ಪಿಟಿಐ): ಉತ್ತರಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ತಮ್ಮ ಸಂಪುಟದ ಇಬ್ಬರು ಸಚಿವರಾದ ಆನಂದ್‌ಕುಮಾರ್ ಸಿಂಗ್‌ ಮತ್ತು ಮನೋಜ್‌ ಪಾರಸ್‌ ಅವರನ್ನು ವಜಾಗೊಳಿಸಿದ್ದಾರೆ.ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರ ಕೆಂಗಣ್ಣಿಗೆ ಕಾರಣರಾಗಿದ್ದ ಈ ಇಬ್ಬರು ಸಚಿವರನ್ನು ಅಖಿಲೇಶ್ ಯಾದವ್  ಸಂಪುಟದಿಂದ ಕೈಬಿಟ್ಟಿದ್ದಾರೆ.ಆನಂದ್ ಕುಮಾರ್ ಸಿಂಗ್ ಅವರ ಪುತ್ರ ಕೀರ್ತಿವರ್ಧನ್‌ ಬಿಜೆಪಿಗೆ ಸೇರಿ ಮುಲಾಯಂ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದರು. ಪಾರಸ್ ಅವರ ವಿರುದ್ಧ ಪಕ್ಷವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ ಆರೋಪ ಕೇಳಿಬಂದಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.