ಭಾನುವಾರ, ಜೂನ್ 13, 2021
21 °C

ಉತ್ತರಾಖಂಡ ಬಿಕ್ಕಟ್ಟು: ಸೋನಿಯಾ ಜತೆ ಚರ್ಚೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಉತ್ತರಾಖಂಡದಲ್ಲಿ ಮುಖ್ಯಮಂತ್ರಿ ಗಾದಿಯ ಬಿಕ್ಕಟ್ಟು ಮುಂದುವರಿದಿದ್ದು, ಅದರ ಇತ್ಯರ್ಥಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಹೊಸ ಮುಖ್ಯಮಂತ್ರಿ ವಿಜಯ್ ಬಹುಗುಣ ಮತ್ತು ಪಕ್ಷದ ಪ್ರಮುಖ ನಾಯಕರ ಜತೆ ಚರ್ಚಿಸಿದರು.ಈ ಚರ್ಚೆಯಲ್ಲಿ ಉತ್ತರಾಖಂಡದಲ್ಲಿ ಪಕ್ಷದ ಉಸ್ತುವಾರಿ  ವಹಿಸಿಕೊಂಡಿರುವ ಚೌಧರಿ ಬೀರೆಂದರ್ ಸಿಂಗ್, ಕೇಂದ್ರ ಸಚಿವ ಗುಲಾಂ ನಬಿ ಆಜಾದ್  ಮತ್ತು ಸೋನಿಯಾ ರಾಜಕೀಯ ಕಾರ್ಯದರ್ಶಿ ಅಹಮದ್ ಪಟೇಲ್ ಭಾಗವಹಿಸಿದ್ದರು.ಹರೀಶ್ ರಾವತ್ ಅವರ ಪತ್ನಿಯನ್ನು ರಾಜ್ಯಸಭಾ ಚುನಾವಣೆಯಲ್ಲಿ ಅಭ್ಯರ್ಥಿಯನ್ನಾಗಿಸುವ ಮೂಲಕ  ಪರಿಸ್ಥಿತಿಯನ್ನು ತಣ್ಣಗಾಗಿಸುವ ಬಗ್ಗೆ ಸಹ ಸಭೆಯಲ್ಲಿ ಚರ್ಚಿಸಲಾಯಿತು ಎನ್ನಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.