ಭಾನುವಾರ, ಜುಲೈ 25, 2021
21 °C

ಉತ್ತರಾಖಂಡ ಸಂತ್ರಸ್ತರಿಗೆ ನಿಧಿ ಸಂಗ್ರಹಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪರಶುರಾಂಪುರ: ಗಡಿಭಾಗದ ಗ್ರಾಮೀಣ ಪ್ರದೇಶದ ಜನರು ಸಹ ದೂರದ ಉತ್ತರಾಖಂಡ ರಾಜ್ಯದಲ್ಲಿ ಸಂಕಷ್ಟದಲ್ಲಿರುವ ಜನರಿಗೆ ಕೈಲಾದ ಸಹಾಯ ಮಾಡುವ ಮೂಲಕ ಮಾನವೀಯತೆ ತೋರಬೇಕು ಎಂದು ತಾಲ್ಲೂಕು ಪಂಚಾಯ್ತಿ ಸದಸ್ಯ ಇ.ಎನ್.ವೆಂಕಟೇಶ್ ಅಭಿಪ್ರಾಯಪಟ್ಟರು.ಇಲ್ಲಿನ ವೇದಾವತಿ ಗಡಿನಾಡು ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ವೇದಿಕೆ ಕಾರ್ಯಕರ್ತರು ಸೋಮವಾರ ನೆರೆ ಸಂತ್ರಸ್ತರ ಕಲ್ಯಾಣ ನಿಧಿಗಾಗಿ ಹಮ್ಮಿಕೊಂಡಿದ್ದ ಹಣ ಸಂಗ್ರಹಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಈ ಹಿಂದೆ ಯುದ್ಧ, ಪ್ರವಾಹ, ಭೂಕಂಪ, ಸುನಾಮಿ ಸಂಭವಿಸಿದ ಸಮಯದಲ್ಲಿ ಧರ್ಮ, ಪ್ರಾಂತ್ಯಗಳ ಭೇದವಿಲ್ಲದೆ ಸಹಾಯ ಮಾಡಲಾಗಿತ್ತು. ಈ ಬಾರಿಯ ಸಂತ್ರಸ್ತರ ನೆರವಿಗೆ ಕೈಲಾದ ಸಹಾಯ ಮಾಡಬೇಕು ಎಂದು ಅವರು ಮನವಿ ಮಾಡಿದರು.

ಗ್ರಾಮ ಪಂಚಾಯ್ತಿ ಸದಸ್ಯರಾದ ಕಾಟಪ್ಪ, ಕರಿಯಣ್ಣ, ಅಂಜಿನಪ್ಪ, ವೇದಿಕೆ ಕಾರ್ಯಕರ್ತರಾದ ಜೆ.ತಿಮ್ಮಯ್ಯ, ರಘು, ತಿಪ್ಪೇಶ, ರಾಜಣ್ಣ, ಸುರೇಶ್, ತಿಪ್ಪೇಸ್ವಾಮಿ ಹಾಜರಿದ್ದರು.ಜಾಗೃತಿ ಆಂದೋಲನ

ಮನೆಗೊಂದು ಗಿಡ ನೆಟ್ಟು ಸಂರಕ್ಷಣೆ ಮಾಡಿ ಪರಿಸರ ಸಮತೋಲನ ಕಾಪಾಡಿಕೊಳ್ಳಬೇಕು ಎಂದು ಗ್ರಾಮ ಪಂಚಾಯ್ತಿ ಅಧ್ಯಕ್ಷ ವೀರೇಶ್ ತಿಳಿಸಿದರು.ಸಮೀಪದ ಕ್ಯಾದಿಗುಂಟೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ಪರಿಸರ ನೈರ್ಮಲ್ಯ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಮಕ್ಕಳಿಗೆ ಶಾಲಾ ಹಂತದಲ್ಲಿಯೇ ಪರಿಸರದ ಅಗತ್ಯತೆಯ ಬಗ್ಗೆ ಜಾಗೃತಿ ಉಂಟುಮಾಡುವ ಕಾರ್ಯಗಳನ್ನು ಏರ್ಪಡಿಸಬೇಕು ಎಂದರು.ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕ ಪಿ.ಎಸ್.  ಸುದರ್ಶನಬಾಬು ಮಾತನಾಡಿ, ಮನೆಯ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡು ಮುಂಜಾಗ್ರತೆ ವಹಿಸಿದರೆ ಸಾಂಕ್ರಾಮಿಕ ರೋಗಗಳು ಹರಡುವುದನ್ನು ತಡೆಯಬಹುದು ಎಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಹನುಮಂತರಾಯ ವಹಿಸಿದ್ದರು, ಗ್ರಾಮ ಪಂಚಾಯ್ತಿ ಸದಸ್ಯರಾದ ಉದಯ ಕುಮಾರ್, ರಾಮಕೃಷ್ಣಪ್ಪ, ಸತ್ಯನಾರಾಯಣ, ಶಿಕ್ಷಕರಾದ ವಿ.ಸಿ.ಕೆಂಚಣ್ಣ, ನಾಗಮ್ಮ, ನಾಗರತ್ನಮ್ಮ, ಪುಷ್ಪಾವತಿ, ರತ್ನಮ್ಮ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.