ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ

7

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ

Published:
Updated:
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ

ಕಾರವಾರ: ಜಿಲ್ಲೆಯ ಕರಾವಳಿ ತಾಲ್ಲೂಕುಗಳಲ್ಲಿ ಬುಧವಾರ ಉತ್ತಮ ಮಳೆಯಾಗಿದ್ದು ಉಳಿದ ತಾಲ್ಲೂಕುಗಳಲ್ಲಿ ಮಳೆ ಕ್ಷೀಣಿಸಿದೆ. ಘಟ್ಟದ ಮೇಲಿನ ತಾಲ್ಲೂಕುಗಳಲ್ಲಿ ಸಂಜೆಯ ಹೊತ್ತಿಗೆ ಮೋಡ ಕವಿದ ವಾತಾವರಣವಿತ್ತಾದರೂ ಮಳೆ ಸುರಿಯಲಿಲ್ಲ.

ಬುಧವಾರ ಮುಂಜಾನೆ 8ಕ್ಕೆ ಅಂತ್ಯಗೊಂಡ ಕಳೆದ 24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯಾದ್ಯಂತ ಒಟ್ಟು 313 ಮಿ.ಮೀ ಮಳೆಯಾಗಿದೆ. ಅಂಕೋಲಾ ತಾಲ್ಲೂಕು 64.2, ಹೊನ್ನಾವರ ತಾಲ್ಲೂಕು 67, ಕಾರವಾರ ತಾಲ್ಲೂಕು 32, ಕುಮಟಾ ತಾಲ್ಲೂಕಿನಲ್ಲಿ 40.2 ಮಿ. ಮೀ. ಮಳೆಯಾಗಿದೆ. ಇದಲ್ಲದೇ ಧಾರವಾಡ, ಬೆಳಗಾವಿ ಜಿಲ್ಲೆಯಲ್ಲಿ ತುಂತುರು ಮಳೆಯಾಗಿದೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry