ಶುಕ್ರವಾರ, ಮೇ 7, 2021
25 °C

ಉತ್ತರ ಕನ್ನಡ ಜಿಲ್ಲೆ ವಿಭಜಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉತ್ತರ ಕನ್ನಡ ಜಿಲ್ಲೆ ಭೌಗೋಳಿಕವಾಗಿ ಸಾಕಷ್ಟು ದೊಡ್ಡದಿದೆ. ಜಿಲ್ಲೆಯ ಕರಾವಳಿ ಮತ್ತು ಘಟ್ಟದ ಮೇಲಿನ ಪ್ರದೇಶವೆಂದು ಎರಡು ಭಾಗಗಳಾಗಿ ಸ್ವಾಭಾವಿಕವಾಗಿಯೇ ವಿಂಗಡನೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯನ್ನು ವಿಭಜಿಸಿ ಎರಡು ಜಿಲ್ಲೆಗಳನ್ನು ರಚಿಸುವ ಬೇಡಿಕೆಯನ್ನು ಸರ್ಕಾರ ಪರಿಶೀಲಿಸಬೇಕು.ಉತ್ತರ ಕನ್ನಡ ಜಿಲ್ಲೆ ಅರಣ್ಯ ಮತ್ತು ಗುಡ್ಡಗಾಡಿನಿಂದ ಆವೃತ್ತವಾಗಿದೆ. ಅಧಿಕಾರಿಗಳು ಇಡೀ ಜಿಲ್ಲೆಯಲ್ಲಿ ಓಡಾಡಿ ಜನರ ಸಮಸ್ಯೆಗಳಿಗೆ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ.

 ಜಿಲ್ಲೆಯನ್ನು ವಿಭಜಿಸಿದರೆ ಎರಡು ಜಿಲ್ಲೆಗಳಾಗಿ ಜನರ ಸಮಸ್ಯೆಗಳ ಬಗ್ಗೆ ಗಮನ ಹರಿಸಲು ಸಾಧ್ಯವಾಗುತ್ತದೆ. ಅಭಿವೃದ್ಧಿಯೂ ಸುಲಭವಾಗುತ್ತದೆ.

 ಜಿಲ್ಲೆ ಜನರು ತಮ್ಮ ಸಂಸ್ಕೃತಿ ಹಾಗೂ ಪರಂಪರೆ ಉಳಿಸಿಕೊಂಡು ಬಂದಿದ್ದಾರೆ. ಜಿಲ್ಲೆ ವಿಭಜನೆ ಆದರೂ ಸಾಂಸ್ಕೃತಿಕ ಸಮಗ್ರತೆಗೆ ಭಂಗವಾಗುವುದಿಲ್ಲ.  

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.