ಶುಕ್ರವಾರ, ಜನವರಿ 24, 2020
21 °C

ಉತ್ತರ ಕರ್ನಾಟಕ ಕೆಲವೆಡೆ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಉತ್ತರ ಕರ್ನಾಟಕದ ಕೆಲವೆಡೆ ಬಿಟ್ಟರೆ ರಾಜ್ಯದಲ್ಲಿ ಸೋಮವಾರ ಗಮನಾರ್ಹ ಪ್ರಮಾಣದಲ್ಲಿ ಮಳೆ ಆಗಿಲ್ಲ.

ವಿಜಾಪುರ, ಹಾವೇರಿ, ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಿದೆ.ವಿಜಾಪುರ ಜಿಲ್ಲೆಯ ಸಿಂದಗಿ ಮತ್ತು ಸುತ್ತಮುತ್ತಲಿನ ಪ್ರದೇಶ, ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಮತ್ತು ಸುತ್ತಮುತ್ತಲಿನ ಪ್ರದೇಶ ಹಾಗೂ ಉ.ಕ. ಜಿಲ್ಲೆಯ ಕರಾವಳಿ ತಾಲ್ಲೂಕುಗಳಲ್ಲಿ ಮಳೆಯಾಗಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಸುಮಾರು 3 ತಾಸು ಧಾರಾಕಾರ ಮಳೆಯಾಗಿದೆ.ತುಮಕೂರು ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಿದೆ. ಮಧುಗಿರಿ, ಪಾವಗಡ, ಕುಣಿಗಲ್ ಮತ್ತು ತುಮಕೂರು ನಗರದಲ್ಲಿ ಮಳೆಯಾಗಿದೆ. ಇಡೀ ದಿನ ಮೋಡ ಕವಿದ ವಾತಾವರಣ ಇತ್ತು.

ಪ್ರತಿಕ್ರಿಯಿಸಿ (+)