ಮಂಗಳವಾರ, ಜೂನ್ 15, 2021
27 °C

ಉತ್ತರ, ದಕ್ಷಿಣ ಒಳನಾಡಿನಲ್ಲಿ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯಾಗಿದೆ. ಕರಾವಳಿಯಲ್ಲಿ ಒಣಹವೆ ಮುಂದುವರೆದಿದೆ.



ಕಳಗಿ ಮತ್ತು ಬೇಗೂರಿನಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಹುಮನಾಬಾದ್, ಚಿಂಚೋಳಿ, ಸೂಳೆಪೇಟೆ, ರಾಯಚೂರು,  ಶಿಡ್ಲಘಟ್ಟದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.



ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಮತ್ತು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳವರೆಗೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ  ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.