ಸೋಮವಾರ, ಜೂನ್ 14, 2021
22 °C

ಉತ್ತರ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಅಖಿಲೇಶ್ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉತ್ತರ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಅಖಿಲೇಶ್ ಆಯ್ಕೆ

ಲಖನೌ (ಪಿಟಿಐ): ಉತ್ತರ ಪ್ರದೇಶದ ನೂತನ ಮುಖ್ಯಮಂತ್ರಿ ಯಾರು ಎನ್ನುವ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದ್ದು, ಶನಿವಾರ ಇಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಸಮಾಜವಾದಿ ಪಕ್ಷವು ಮತ್ತೆ ಅಧಿಕಾರಕ್ಕೆ ಬರಲು ನಿರ್ಣಾಯಕ ಪಾತ್ರ ವಹಿಸಿದ್ದ ಯುವ ನಾಯಕ ಅಖಿಲೇಶ್ ಸಿಂಗ್ ಯಾದವ್ (38) ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ.ಸಭೆಯಲ್ಲಿ ನೂತನ ಶಾಸಕನಾಗಿ ಆಯ್ಕೆಯಾಗಿರುವ ಹಾಗೂ ಸಂಸದ ಮೊಹಮ್ಮದ್ ಅಜಮ್ ಖಾನ್ ಅವರು ನೂತನ ಸಿಎಂ ಸ್ಥಾನಕ್ಕೆ ಅಖಿಲೇಶ್ ಅವರ ಹೆಸರನ್ನು ಸೂಚಿಸುತ್ತಿದ್ದಂತೇ ಎಲ್ಲ ಶಾಸಕರು ಒಮ್ಮತ ಸೂಚಿಸಿದರು.ಈ ಮೂಲಕ ಅಖಿಲೇಶ್ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಹುದ್ದೆಗೇರಿದ ಅತಿ ಕಿರಿಯ ವಯಸ್ಸಿನ ವ್ಯಕ್ತಿಯಾಗಿದ್ದಾರೆ.

ಕೊಟ್ಟ ವಚನ ಈಡೇರಿಕೆಗೆ ಪ್ರಾಮುಖ್ಯತೆ: 

ಚುನಾವಣೆಯ ಸಮಯದಲ್ಲಿ ಮತದಾರರಿಗೆ ಕೊಟ್ಟ ವಚನ ಈಡೇರಿಸುವುದೇ ಸಮಾಜವಾದಿ ಪಕ್ಷದ ಮೊದಲ ಆದ್ಯತೆ ಎಂದು ಉತ್ತರ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಅಖಿಲೇಶ್ ಯಾದವ್ ತಿಳಿಸಿದರು.ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಖಿಲೇಶ್ ಅವರು `ಚುನಾವಣೆಯ ವೇಳೆ ಮತದಾರರಿಗೆ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಕಾರ್ಯಗತಗೊಳಿಸುವುದೆ ತಮ್ಮ ಪಕ್ಷದ ಮೊದಲ ಆದ್ಯತೆಯಾಗಿದ್ದು, ತಾವು ಯಾವುದೇ ರೀತಿಯ ಹಗೆತನದ ರಾಜಕೀಯ ಮಾಡುವುದಿಲ್ಲ~ ಎಂದು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.