ಗುರುವಾರ , ಜೂನ್ 17, 2021
22 °C

ಉತ್ತರ ಪ್ರದೇಶ: ಅಖಿಲೇಶ್‌ಗೆ ಪಟ್ಟ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಖನೌ (ಪಿಟಿಐ): ಉತ್ತರ ಪ್ರದೇಶದ ನೂತನ ಮುಖ್ಯಮಂತ್ರಿ ಯಾರು ಎನ್ನುವ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದೆ. ರಾಜ್ಯದಲ್ಲಿ ಸಮಾಜವಾದಿ ಪಕ್ಷವು ಮತ್ತೆ ಅಧಿಕಾರಕ್ಕೆ ಬರಲು ನಿರ್ಣಾಯಕ ಪಾತ್ರ ವಹಿಸಿದ್ದ ಯುವ ನಾಯಕ ಅಖಿಲೇಶ್ ಸಿಂಗ್ ಯಾದವ್ ಅಧಿಕಾರ ದಂಡ ಹಿಡಿಯಲಿದ್ದಾರೆ ಎಂದು ತಿಳಿದುಬಂದಿದೆ.ಪಕ್ಷದ ಪ್ರಧಾನ ಕಾರ್ಯದರ್ಶಿ ಅಖಿಲೇಶ್ ಅವರು ಆಡಳಿತದ ಚುಕ್ಕಾಣಿ ಹಿಡಿಯುವ ಬಗ್ಗೆ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್  ಹಿರಿಯ ನಾಯಕರಿಗೆ ಮನವರಿಕೆ ಮಾಡಿಕೊಟ್ಟಿದ್ದಾಗಿ ಮೂಲಗಳು ತಿಳಿಸಿವೆ.

ಶನಿವಾರ ನಡೆಯಲಿರುವ ಪಕ್ಷದ ಸಂಸದೀಯ ಮಂಡಳಿ ಸಭೆ ಬಳಿಕ ಅಧಿಕೃತ ಹೇಳಿಕೆ ಹೊರಬೀಳಲಿದೆ.ಮುಲಾಯಂ ಸಿಂಗ್ ಅವರ ಅನಾರೋಗ್ಯದ ಕಾರಣದಿಂದಾಗಿ ಅಖಿಲೇಶ್‌ಗೆ ಈ ಜವಾಬ್ದಾರಿ ಹೊರಿಸಲು ನಿರ್ಧರಿಸಲಾಗಿದೆ ಎಂದೂ ಮೂಲಗಳು ಹೇಳಿವೆ. ಇದೇ 12ರಂದು ಅಖಿಲೇಶ್ ಅಧಿಕಾರ ಸ್ವೀಕರಿಸುವರು ಎನ್ನಲಾಗಿದೆ.ಚುನಾವಣಾ ಫಲಿತಾಂಶ ಹೊರಬಿದ್ದ ದಿನವೇ ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಕುತೂಹಲ ಹೆಚ್ಚಿತ್ತು. ಚುರುಕಿನ ಚುನಾವಣಾ ಪ್ರಚಾರದ ಮೂಲಕ ಅಖಿಲೇಶ್ ಮಾಡಿದ ಮೋಡಿ ಪಕ್ಷಕ್ಕೆ ಹೊಸ ವರ್ಚಸ್ಸು ತಂದುಕೊಟ್ಟಿದೆ. ಹಾಗಾಗಿ ಅವರೇ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿಯಬೇಕು ಎಂದು ಪಕ್ಷದಲ್ಲಿ ಹಲವರು ಅಭಿಪ್ರಾಯ ಪಟ್ಟಿದ್ದರು. ಆದರೆ ಕೆಲವು ಹಿರಿಯ ಮುಖಂಡರು ಇದಕ್ಕೆ ತಕರಾರು ಎತ್ತಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.