ಸೋಮವಾರ, ಮೇ 10, 2021
25 °C

ಉತ್ತರ ಪ್ರದೇಶ: ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಹುಕುಂ ಸಿಂಗ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಖನೌ (ಪಿಟಿಐ): ಉತ್ತರ ಪ್ರದೇಶ ವಿಧಾನ ಸಭೆಯ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಕೈರಾನ ಕ್ಷೇತ್ರದ ಶಾಸಕ ಹುಕುಂ ಸಿಂಗ್ ಆಯ್ಕೆಯಾಗಿದ್ದಾರೆ. ಹಲವು ಬಾರಿ ಶಾಸಕರಾಗಿದ್ದ ಅವರು ಕಳೆದ ವಿಧಾನಸಭೆಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಉಪನಾಯಕರಾಗಿದ್ದರು.ಶಾಸನ ಸಭೆಯಲ್ಲಿ ಪಕ್ಷದ ಹಿರಿಯ ನಾಯಕ, ಶಾಸಕ ಕಲ್ರಾಜ್ ಮಿಶ್ರಾ ಅವರು ಹುಕಂ ಸಿಂಗ್ ಅವರ ಹೆಸರನ್ನು ಸೂಚಿಸಿದರು. ಶಾಸಕರು ಒಮ್ಮತದಿಂದ ಸಿಂಗ್ ಅವರನ್ನು ಆಯ್ಕೆ ಮಾಡಿದರು ಎಂದು ಪಕ್ಷದ ಮೂಲಗಳು ತಿಳಿಸಿವೆ.ಈ ಸಭೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಸೂರ‌್ಯ ಪ್ರತಾಪ ಶಾಹಿ ಸೇರಿದಂತೆ ಕೇಂದ್ರ ವೀಕ್ಷಕರಾಗಿ ತಾವರ್ ಚಂದ್ರ ಮತ್ತು ನರೇಂದ್ರ ಸಿಂಗ್ ತೋಮರ್ ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.