ಮಂಗಳವಾರ, ಜೂನ್ 22, 2021
22 °C

ಉತ್ತರ ಪ್ರದೇಶ: ಸಚಿವರಿಗೆ ಖಾತೆ ಹಂಚಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಖನೌ (ಪಿಟಿಐ): ಉತ್ತರ ಪ್ರದೇಶದ ಯುವ ಮುಖ್ಯಮಂತ್ರಿ ಅಖಿಲೇಶ್ ಯಾದವ್ ತಮ್ಮ ಸಹೋದ್ಯೋಗಿ ಸಚಿವರಿಗೆ ಭಾನುವಾರ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ ಆದರೆ ಗೃಹ, ಹಣಕಾಸು ಸೇರಿದಂತೆ ಹಲವು ಪ್ರಮುಖ ಇಲಾಖೆಗಳನ್ನು ತಮ್ಮ ಬಳಿಯೇ ಇರಿಸಿಕೊಂಡಿದ್ದಾರೆ.



ಕೊಲೆ ಯತ್ನ, ಅಪಹರಣಗಳಂತಹ ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿರುವ ಪಕ್ಷೇತರ ಶಾಸಕ ರಘುರಾಜ್ ಪ್ರತಾಪ್ ಸಿಂಗ್ ಅಲಿಯಾಸ್ ರಾಜಾ ಭಯ್ಯಾ ಅವರಿಗೆ ಕಾರಾಗೃಹ ಇಲಾಖೆ ಹೊಣೆಗಾರಿಕೆ ನೀಡಲಾಗಿದೆ.  ಹಿಂದಿನ ಮುಖ್ಯಮಂತ್ರಿ ಮಾಯಾವತಿ ಅವರು ರಾಜಾ ಭಯ್ಯಾ ಅವರನ್ನು ಜೈಲಿಗೆ ಕಳುಹಿಸಿದ್ದರು.



ಅಖಿಲೇಶ್ ಯಾದವ್ ಅವರ ಚಿಕ್ಕಪ್ಪ ಶಿವಪಾಲ್ ಸಿಂಗ್ ಯಾದವ್ ಅವರಿಗೆ ಲೋಕೋಪಯೋಗಿ ಮತ್ತು ನೀರಾವರಿ ಇಲಾಖೆಯ ಜವಾಬ್ದಾರಿ ನೀಡಲಾಗಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.