ಮಂಗಳವಾರ, ಜನವರಿ 21, 2020
28 °C

ಉತ್ತರ ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ: ವಿಜಯೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಕನೂರು: ದೆಹಲಿ, ಮಧ್ಯಪ್ರದೇಶ, ಛತ್ತೀಸಗಡ ಹಾಗೂ ರಾಜಸ್ಥಾನ ರಾಜ್ಯಗಳ ವಿಧಾನ ಸಭೆ ಚುನಾವಣೆ­ಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗಳಿಸಿದ್ದಕ್ಕಾಗಿ ಇಲ್ಲಿಯ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯ­ಕರ್ತರು ಈಚೆಗೆ ವಿಜಯೋತ್ಸವ ಆಚರಿಸಿದರು. ಬಿಜೆಪಿ ಮುಖಂಡ ಶಂಭು ಜೋಳದ, ತಾಲ್ಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಘು ನಾಡಗೌಡ್ರ, ರವಿ ಜಕ್ಕಾ ವಿಜಯೋತ್ಸವ ಸಮಾರಂಭ ಉದ್ದೇಶಿಸಿ ಮಾತನಾಡಿ, ಉತ್ತರ ರಾಜ್ಯಗಳಲ್ಲಿ ಬಿಜೆಪಿ ಪಕ್ಷಕ್ಕೆ ದೊರೆತ ಗೆಲುವು ಮುಂಬರುವ ಲೋಕಸಭಾ ಚುನಾವಣೆಯ ದಿಕ್ಸೂಚಿಯಾಗಿದೆ.

ಬಿಜೆಪಿ ಪ್ರಧಾನ ಮಂತ್ರಿ ಅಭ್ಯರ್ಥಿಯಾ­ಗಿರುವ ನರೇಂದ್ರ ಮೋದಿ ಅವರ ಮೇಲೆ ವಿಶ್ವಾಸ ಇಟ್ಟು ನಾಲ್ಕು ರಾಜ್ಯಗಳ ಮತದಾರರು ಮತ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಎಲ್ಲ ರಾಜ್ಯಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆ ಆಗುವುದ­ರಲ್ಲಿ ಸಂದೇಹ ಇಲ್ಲ.

ರಾಜ್ಯದಲ್ಲಿಯೂ ಕಳೆದ ಬಾರಿಗಿಂತ ಈ ಬಾರಿ ಮತ್ತಷ್ಟು ಹೆಚ್ಚು ಅಭ್ಯರ್ಥಿಗಳು ಆಯ್ಕೆಯಾಗು­ತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಕಾರ್ಯಕರ್ತರು ದೃತಿಗೆಡದೆ ಪಕ್ಷದಲ್ಲಿ ಸಂಘಟನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.ಗ್ರಾಮ ಪಂಚಾಯಿತಿ ಸದಸ್ಯರಾದ ಗೋವಿಂದರಾವ್‌ ಕುಲಕರ್ಣಿ, ಶರಣಯ್ಯ ಬಂಡಿ, ರಾಮಣ್ಣ ಕಲಾಲ, ರಾಮಣ್ಣ ಯಡ್ಡೋಣಿ, ರಮೇಶ ಶಾಸ್ತ್ರಿ, ನೀಲಕಂಠಪ್ಪ ಬಣ್ಣದಬಾವಿ, ಮುಖಂಡ­ರಾದ ನಾಗಪ್ಪ ಕಲ್ಮನಿ, ಶರಣಪ್ಪ ಕೂಡ್ಲೂರು ಸೇರಿದಂತೆ ಹಲವರು ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು.

ಪ್ರತಿಕ್ರಿಯಿಸಿ (+)