ಶನಿವಾರ, ಮೇ 15, 2021
24 °C

ಉದ್ಯಮ ವಲಯ ವಿಶ್ವಾಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಸಗಟು ಹಣದುಬ್ಬರ ಮೂರೂವರೆ ವರ್ಷಗಳ ಹಿಂದಿನ ಮಟ್ಟಕ್ಕೆ ಕುಸಿದಿರುವುದರಿಂದ  `ಆರ್‌ಬಿಐ' ಜೂನ್ 17ರಂದು ಪ್ರಕಟಿಸಲಿರುವ ಹಣಕಾಸು ನೀತಿಯಲ್ಲಿ ಬಡ್ಡಿ ದರ ಕಡಿತ ಮಾಡಲಿದೆ ಎಂದು ಭಾರತೀಯ ವಾಣಿಜ್ಯೋದ್ಯಮ ಮಹಾಸಂಘಗಳ ಒಕ್ಕೂಟ (ಫಿಕ್ಕಿ) ಹೇಳಿದೆ.ರೆಪೊ ದರ ಕಡಿತದ ಲಾಭವನ್ನು ಬ್ಯಾಂಕುಗಳು ಗ್ರಾಹಕರಿಗೆ ವರ್ಗಾಯಿಸಬೇಕು ಎಂದು ಭಾರತೀಯ ಕೈಗಾರಿಕಾ ಒಕ್ಕೂಟ (ಸಿಐಐ) ಹೇಳಿದೆ.`ಹಣದುಬ್ಬರ ನಮ್ಮ ನಿರೀಕ್ಷೆಗೂ ಮೀರಿ ಇಳಿಕೆ ಕಂಡಿರುವ ಹಿನ್ನೆಲೆಯಲ್ಲಿ ಬಡ್ಡಿ ದರ ಕಡಿತ ಸಾಧ್ಯತೆ ಹೆಚ್ಚಿದೆ ಎಂದು ಕೇಂದ್ರ ಯೋಜನಾ ಆಯೋಗದ ಉಪಾಧ್ಯಕ್ಷ ಮೊಂಟೆಕ್ ಸಿಂಗ್ ಅಹ್ಲುವಾಲಿಯಾ ಪ್ರತಿಕ್ರಿಯಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.