ಶುಕ್ರವಾರ, ಮೇ 27, 2022
23 °C

ಉದ್ಯಾನ ಪ್ರವೇಶಕ್ಕೆ ಶುಲ್ಕ ತಂದ ಅಚ್ಚರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಬಿಬಿಎಂಪಿ ಉದ್ಯಾನಕ್ಕೆ ಪ್ರವೇಶ ಶುಲ್ಕವೇ...?’ ಸ್ಯಾಂಕಿ ಕೆರೆ ಬಳಿಯ ಬಿಬಿಎಂಪಿ ಉದ್ಯಾನಕ್ಕೆ ಸದಾಶಿವನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘವು ಪ್ರವೇಶ ಶುಲ್ಕ ಸಂಗ್ರಹಿಸುವ ಬಗ್ಗೆ ಆಯುಕ್ತ ಸಿದ್ದಯ್ಯ ಅಚ್ಚರಿ ವ್ಯಕ್ತಪಡಿಸಿದ್ದು ಹೀಗೆ... ಸ್ಯಾಂಕಿ ಕೆರೆ ಸಮೀಪದ ಸದಾಶಿವನಗರ ಉದ್ಯಾನ ಪ್ರವೇಶಕ್ಕೆ ಅಲ್ಲಿನ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘವು ಶುಲ್ಕ ಸಂಗ್ರಹಿಸುವ ಬಗ್ಗೆ ಆಯುಕ್ತರು ತೀವ್ರ ಸಮಾಧಾನ ವ್ಯಕ್ತಪಡಿಸಿದರು.‘ನಗರದಲ್ಲಿ 700ಕ್ಕೂ ಹೆಚ್ಚು ಉದ್ಯಾನಗಳಿವೆ. ಅಲ್ಲದೇ ಇದಕ್ಕಿಂತಲೂ ಉತ್ತಮ ಸೌಲಭ್ಯವುಳ್ಳ ಹಾಗೂ ಸುಂದರವಾದ ಉದ್ಯಾನಗಳಿವೆ. ಆ ಯಾವ ಉದ್ಯಾನಗಳಲ್ಲೂ ಪ್ರವೇಶ ಶುಲ್ಕ ಸಂಗ್ರಹಿಸುತ್ತಿಲ್ಲ. ಆದರೆ ಈ ಉದ್ಯಾನದಲ್ಲಿ ಶುಲ್ಕ ಸಂಗ್ರಹಿಸಲಾಗುತ್ತಿದೆ. ಕೂಡಲೇ ಇದರ ಬಗ್ಗೆ ಪರಿಶೀಲಿಸಲಾಗುವುದು. ಒಂದೊಮ್ಮೆ ಶುಲ್ಕ ಸಂಗ್ರಹಿಸುವಂತೆ ಸಂಘದೊಂaದಿಗೆ ಒಡಂಬಡಿಕೆ ಮಾಡಿಕೊಂಡಿದ್ದರೆ ಕೂಡಲೇ ಅದನ್ನು ರದ್ದುಪಡಿಸುವಂತೆ ತೋಟಗಾರಿಕೆ ಸ್ಥಾಯಿ ಸಮಿತಿಗೆ ಮನವಿ ಸಲ್ಲಿಸಲಾಗುವುದು’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.