ಸೋಮವಾರ, ಜೂನ್ 21, 2021
30 °C

ಉದ್ಯೋಗ ಖಾತರಿಗೆ ಆಗ್ರಹಿಸಿ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ಹೊಸಪೇಟೆ ತಾಲ್ಲೂಕಿನ ಕೆಲ ಗ್ರಾಮ ಪಂಚಾಯ್ತಿಗಳಲ್ಲಿ ಸ್ಥಗಿತ ಗೊಂಡಿರುವ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಆರಂಭಿಸ ಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಕೂಲಿ ಕಾರ್ಮಿಕರು ತಾಲ್ಲೂಕು ಪಂಚಾಯ್ತಿ ಎದುರು ಪ್ರತಿಭಟನೆ ನಡೆಸಿದರು.ಗುರುವಾರ ಬೆಳಿಗ್ಗೆ 11 ಗಂಟೆ ಯಿಂದ ಸಂಜೆ 5 ಗಂಟೆಯ ವರೆಗೂ ಪ್ರತಿಭಟನೆ ನಡೆಸಿದ ಕಾರ್ಮಿಕರು ಹೊಸಪೇಟೆ ತಾಲ್ಲೂಕು ಪಂಚಾಯ್ತಿ ವ್ಯಾಪ್ತಿಯ ಡಣಾಪುರ, ಮರಿಯಮ್ಮನ ಹಳ್ಳಿ, ನಾಗಲಾಪುರ, ಶಂಕರನಗರ, ಬಿ.ಪಿ.ಹಳ್ಳಿ, ಗ್ರಾಮಗಳ ವ್ಯಾಪ್ತಿಯಲ್ಲಿ ಸ್ಥಗಿತಗೊಂಡಿರುವ ಕಾಮಗಾರಿಗಳನ್ನು ಆರಂಭಿಸಬೇಕು, ಕೆಲ ದಿನಗಳಕಾಲ ಕಾಮಗಾರಿಗಳಲ್ಲಿ ಪಾಲ್ಗೊಂಡ ಕಾರ್ಮಿ ಕರ ವೇತನ ಬಾಕಿ ನೀಡಬೇಕು ಮತ್ತು ನಿರುದ್ಯೋಗ ಭತ್ತೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.ಪ್ರತಿಭಟನಾಕಾರರೊಂದಿಗೆ ಮಾತ ನಾಡಿದ ತಾಲ್ಲೂಕು ಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಬಾಲಸ್ವಾಮಿ ದೇಶಪ್ಪ ಕಾರಣಾಂತರ ಗಳಿಂದ ಕಾಮಗಾರಿ ಸ್ಥಗಿತಗೊಂಡಿದೆ. ಈ ತಕ್ಷಣದಿಂದ ಕಾಮಗಾರಿಯನ್ನು ಆರಂಭಿಸುವುದಾಗಿ ಮತ್ತು ಬಾಕಿ ಇರುವ ವೇತನ ನೀಡಲು ಸಂಬಧಿಸಿದ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಗಳಿಗೆ ಸೂಚನೆ ನೀಡುವುದಾಗಿ ಹೇಳಿದರು.ಪ್ರತಿಭಟನೆಯಲ್ಲಿ ಮರಿಯಮ್ಮನ ಹಳ್ಳಿ ಸೇರಿದಂತೆ ಗ್ರಾಮಗಳ ವ್ಯಾಪ್ತಿಯ ಕೂಲಿ ಕಾರ್ಮಿಕರು ಹಾಜರಿದ್ದರು.

ಮುಖಂಡರಾದ ಮಂಜುಳಾ, ರಾಘವೇಂದ್ರ, ಮಲ್ಲಿಕಾರ್ಜುನ, ನಿಂಗಮ್ಮ, ಯಲ್ಲಮ್ಮ ಮತ್ತು ರಾಘವೇಂದ್ರ ಬೋಗಾರೆಡ್ಡಿ ಸೇರಿದಂತೆ ಇತರರು ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.