ಶುಕ್ರವಾರ, ಮೇ 14, 2021
22 °C

ಉದ್ಯೋಗ ಖಾತ್ರಿಗೆ ಕೇಂದ್ರದಿಂದ ರೂ700 ಕೋಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: `ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕಾಮಗಾರಿ ಕೈಗೊಳ್ಳಲು ಕೇಂದ್ರ ಸರ್ಕಾರ ಎರಡು ದಿನಗಳ ಹಿಂದೆ ರೂ700 ಕೋಟಿ  ಬಿಡುಗಡೆ ಮಾಡಿದೆ~ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಜಗದೀಶ ಶೆಟ್ಟರ್ ತಿಳಿಸಿದರು.ಧಾರವಾಡ ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಮಂಗಳವಾರ ಭೇಟಿ ನೀಡಿದ ಅವರು, ಹಿರೇನರ್ತಿ ಗ್ರಾಮದಲ್ಲಿ ವರದಿಗಾರರ ಜೊತೆ ಮಾತನಾಡಿದರು.`ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೈಗೊಂಡ ಕಾಮಗಾರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ  ್ಙ450 ಕೋಟಿ ಬಾಕಿ ಉಳಿಸಿಕೊಂಡಿತ್ತು. 15 ದಿನಗಳ ಹಿಂದೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಜೈರಾಮ್ ರಮೇಶ್ ಅವರನ್ನು ಭೇಟಿ ಮಾಡಿ ತಕ್ಷಣ ಹಣ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದ್ದೆ. ಅದಕ್ಕೆ ಸ್ಪಂದಿಸಿದ ಸಚಿವರು, ಬಾಕಿ ಮಾತ್ರವಲ್ಲದೆ, ಮತ್ತೆ ಉದ್ಯೋಗ ನೀಡಲು ಹೆಚ್ಚುವರಿ ಹಣವನ್ನೂ ಬಿಡುಗಡೆ ಮಾಡಿದ್ದಾರೆ~ ಎಂದುವಿವರಿಸಿದರು.`ಬರಪೀಡಿತ ಪ್ರದೇಶಗಳಲ್ಲಿ ಕಾಮಗಾರಿಗೆ ಮಂಜೂರಾತಿ ದೊರೆಯುವ ತನಕ ಕಾಯದೆ ಬಡಕಾರ್ಮಿಕರಿಗೆ ತಕ್ಷಣ ಉದ್ಯೋಗ ನೀಡಬೇಕು. ಕೆರೆ ಹೂಳೆತ್ತುವಂತಹ ಕಾಮಗಾರಿಗಳನ್ನು ಆದ್ಯತೆ ಮೇಲೆ ಕೈಗೆತ್ತಿಕೊಳ್ಳಬೇಕು ಎಂಬ ಸೂಚನೆಯನ್ನು ಅಧಿಕಾರಿಗಳಿಗೆ ನೀಡಲಾಗಿದೆ~ ಎಂದು ಹೇಳಿದರು. ಲೋಕೋಪ ಯೋಗಿ ಸಚಿವ ಸಿ.ಎಂ ಉದಾಸಿ ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.