ಸೋಮವಾರ, ಜೂನ್ 14, 2021
24 °C

ಉದ್ಯೋಗ ಖಾತ್ರಿ: ಕನಿಷ್ಠ ವೇತನ ಪರಿಷ್ಕರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಜ್ಯದಲ್ಲಿ `ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ~ಯ ಕನಿಷ್ಠ ವೇತನ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲಾಗಿದ್ದು, ರೂ 125 ಅನ್ನು 155ಕ್ಕೆ ಹೆಚ್ಚಿಸಲಾಗಿದೆ.ರಾಜ್ಯ ಹೈಕೋರ್ಟ್ ಸೆಪ್ಟೆಂಬರ್‌ನಲ್ಲಿ ನೀಡಿದ ತೀರ್ಪಿನ ಹಿನ್ನೆಲೆಯಲ್ಲಿ ಈ ಯೋಜನೆಯ ಕನಿಷ್ಠ ವೇತನವನ್ನು ಪರಿಷ್ಕರಿಸಲಾಗಿದೆ. ರಾಜ್ಯದ ಕನಿಷ್ಠ ವೇತನಕ್ಕೆ ಸಮಾನವಾಗಿ ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕನಿಷ್ಠ ವೇತನವೂ ಇರಬೇಕೆಂದು ನ್ಯಾಯಾಲಯ ಹೇಳಿತ್ತು. ಈ ಆದೇಶವನ್ನು ಸುಪ್ರೀಂ ಕೋರ್ಟ್ ಜನವರಿಯಲ್ಲಿ ಎತ್ತಿ ಹಿಡಿದಿದೆ.ರಾಜ್ಯದಲ್ಲಿ ಕನಿಷ್ಠ ವೇತನ ರೂ.146 ರೂಪಾಯಿ ಇದೆ. ಇದರಿಂದಾಗಿ  ಯೋಜನೆಯ ಕನಿಷ್ಠ ವೇತನ ರೂ.155ಕ್ಕೆ ಹೆಚ್ಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಜೈರಾಂರಮೇಶ್ ಲೋಕಸಭೆಗೆ ಸೋಮವಾರ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.