ಶನಿವಾರ, ಜೂನ್ 19, 2021
27 °C

ಉದ್ಯೋಗ ಖಾತ್ರಿ ಸದ್ಬಳಕೆ ಅಗತ್ಯ– ಮೂರ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಾವಗಲ್‌:  ಉದ್ಯೋಗ ಖಾತ್ರಿ ಯೋಜನೆಯಲ್ಲಿ ವೈಯುಕ್ತಿಕ ಮತ್ತು ಸಮುದಾಯ ಕಾಮಗಾರಿ ಎಂಬ ವಿಭಾಗಗಳಿದ್ದು, ರೈತರು ತಮಗೆ ಉಪಯುಕ್ತವಾದ ಕಾಮಗಾರಿಗಳನ್ನು ಮಾಡಿಸಿಕೊಂಡು ಬದುಕನ್ನು ಉತ್ತಮಪಡಿಸಿಕೊಳ್ಳಬೇಕು ಎಂದು ಅರಸೀಕೆರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಟಿ.ಎನ್‌. ಮೂರ್ತಿ ತಿಳಿಸಿದರು.ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ಮಂಗಳವಾರ  ಹಂದ್ರಾಳು ಗ್ರಾಮದಲ್ಲಿ ಏರ್ಪಡಿಸಿದ್ದ ವಾರ್ಷಿಕ ವಿಶೇಷ ಶಿಬಿರದಲ್ಲಿ ಅವರು ಮಾತನಾಡಿದರು.ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಾಲಕೃಷ್ಣನಾಯಕ, ಚನ್ನಬಸಪ್ಪ, ಬಸಪ್ಪ, ಬಸವರಾಜು, ಸದಾಶಿವಪ್ಪ, ಕುಮಾರಸ್ವಾಮಿ, ಮಾತನಾಡಿದರು. ಸಹಪ್ರಾಧ್ಯಾಪಕ ಶಿವಶಂಕರ ಮೂರ್ತಿ ಅಧ್ಯಕ್ಷತೆ ವಹಿಸಿದ್ದರು.ಜಾವಗಲ್‌ ಪಶು ಆಸ್ಪತ್ರೆ ಸಹಾಯಕ ನಿರ್ದೇಶಕ ಡಾ.ಶ್ರೀರಂಗನಾಥ್‌ ಮತ್ತು ಸಿಬ್ಬಂದಿ ಜಾನುವಾರುಗಳ ತಪಾಸಣೆ ಮತ್ತು ಚಿಕಿತ್ಸೆ ನಡೆಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.