ಮಂಗಳವಾರ, ಮೇ 24, 2022
30 °C

ಉದ್ಯೋಗ ಭದ್ರತೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ನೌಕರರಿಗೆ ರಕ್ಷಣೆ ಕಲ್ಪಿಸಿ ಉದ್ಯೋಗ ಭದ್ರತೆ ನೀಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸಿಐಟಿಯು ಸಂಘಟನೆಯ ತಾಲ್ಲೂಕು ಘಟಕ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ರಾಯಚೂರು ತಾಲ್ಲೂಕಿನ ಶಕ್ತಿನಗರ ಲೇಬರ್ ಕಾಲೊನಿಯ ಅಂಗನವಾಡಿ ಕಾರ್ಯಕರ್ತೆ ಆಶ್ರಫ್ ಅವರ ಸ್ಥಾನಕ್ಕೆ ದೇವದುರ್ಗ ತಾಲ್ಲೂಕಿನ ರಾಮಲಿಂಗಮ್ಮ ಎಂಬ ಕಾರ್ಯಕರ್ತೆಯನ್ನು ನಿಯಮಬಾಹಿರವಾಗಿ ನೇಮಿಸಿ ಅಧಿಕಾರಿಯನ್ನು ಅಮಾನತುಗೊಳಿಸಬೇಕು ಹಾಗೂ ಆಶ್ರಫ್ ಅವರನ್ನು ಪುನಃ ಶಕ್ತಿನಗರ ಲೇಬರ್ ಕಾಲೊನಿಯ ಅಂಗನವಾಡಿ ಕಾರ್ಯಕರ್ತೆಯನ್ನಾಗಿ ಮುಂದುವರಿಸಬೇಕು ಎಂದು ಒತ್ತಾಯಿಸಿದರು.ತಾಲ್ಲೂಕಿನ ತುರಕನಡೋಣಿ ಅಕ್ಷರ ದಾಸೋಹ ಬಿಸಿಯೂಟ ನೌಕರರ ಕೆಲಸ ಮಾಡಲು ಅಡ್ಡಿಪಡಿಸಿದ ದೌರ್ಜನ್ಯ ನಡೆಸುತ್ತಿರುವ ಶಾಲಾ ಮುಖ್ಯಗುರು ವಿರುದ್ಧ ಕ್ರಮ ತೆಗೆದುಕೊಳ್ಳಬೇಕು, ರಾಯಚೂರು ತಾಲ್ಲೂಕಿನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಹಾಗೂ ಅಂಗನವಾಡಿ ಸಹಾಯಕಿಯರ ಖಾಲಿ ಹುದ್ದೆಗಳಿಗೆ ನಿಯಮಾನುಸಾರ ನೇಮಕ ಮಾಡಬೇಕು ಎಂದು ಆಗ್ರಹಿಸಿದರು.ಖಾಲಿ ಇರುವ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್-2ಅರ್ಹ ಸಿಬ್ಬಂದಿ ಅನುಮೋದನೆ ನೀಡಿ ಪದೋನ್ನತಿ ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಐಟಿಯು ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಎಸ್ ವೀರಭದ್ರ, ಕಾರ್ಯದರ್ಶಿ ಡಿ.ಎಸ್ ಶರಣಬಸವ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಪತ್ರದಲ್ಲಿ ತಿಳಿಸಿದ್ದಾರೆ.ಸಂಘಟನೆ ಪದಾಧಿಕಾರಿಗಳಾದ ಎಚ್.ಪದ್ಮಾ, ಚನ್ನಬಸಯ್ಯ, ವರಲಕ್ಷ್ಮಿ, ಸಂಧ್ಯಾ, ಅಕ್ಕಮ್ಮ, ನಾಗಮ್ಮ, ಪ್ರವೀಣರೆಡ್ಡಿ, ಕೆ.ಜಿ ವೀರೇಶ, ಪಾರ್ವತಿ, ಮಲ್ಲಿಕಾ ಹಾಗೂ ಮತ್ತಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.