ಉದ್ಯೋಗ ಭದ್ರತೆ ಒದಗಿಸಿ

7

ಉದ್ಯೋಗ ಭದ್ರತೆ ಒದಗಿಸಿ

Published:
Updated:

ಬೆಂಗಳೂರು: `ಗ್ರಾಮೀಣ ಆರೋಗ್ಯ ಮತ್ತು ನೈರ್ಮಲ್ಯ ಕಾಪಾಡುವಲ್ಲಿ ಆಶಾ ಕಾರ್ಯಕರ್ತೆಯರು ಶ್ರಮವಹಿಸುತ್ತಿದ್ದಾರೆ. ಆದರೆ ಅವರ ಜೀವನ ಭದ್ರತೆ ಆಶಾದಾಯಕವಾಗಿಲ್ಲ~ ಎಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅಭಿಪ್ರಾಯಪಟ್ಟರು.

 

ಕರ್ನಾಟಕ ರಾಜ್ಯ ಆಶಾ ಕಾರ್ಯಕರ್ತೆಯರ ಸಂಘವು ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಆಶಾ ಕಾರ್ಯಕರ್ತೆಯರ ಕುರಿತ ರಾಜ್ಯಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

`ಗ್ರಾಮೀಣದ ಭಾಗದಲ್ಲಿ ರೋಗಗಳು ಹರಡದಂತೆ ನಿಯಂತ್ರಿಸುವಲ್ಲಿ ಆಶಾ ಕಾರ್ಯಕರ್ತರ ಪಾತ್ರ ಮಹತ್ವದ್ದಾಗಿದ್ದು, ಸರ್ಕಾರ ಅವರಿಗೆ ಸೂಕ್ತ ಉದ್ಯೋಗ ಭದ್ರತೆ ಒದಗಿಸುವ ಮೂಲಕ ಗ್ರಾಮೀಣ ಜನರ ಆರೋಗ್ಯ ರಕ್ಷಣೆಗೆ ಪಣತೊಡಬೇಕಿದೆ~ ಎಂದು ಹೇಳಿದರು.ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನದ ನಿರ್ದೇಶಕ ಸೆಲ್ವಕುಮಾರ್, `ಆಶಾ ಕಾರ್ಯಕರ್ತರು ಎದುರಿಸುತ್ತಿರುವ ಸಮಸ್ಯೆಗಳು ಈಗಾಗಲೇ ಗಮನಕ್ಕೆ ಬಂದಿದ್ದು, ಈ ಬಗ್ಗೆ ಜಿಲ್ಲಾ ಮಟ್ಟದಲ್ಲಿ ಆಶಾ ಸೌಲಭ್ಯ ಕೇಂದ್ರವನ್ನು ತೆರೆಯುವ ಕುರಿತು ಚಿಂತನೆ ನಡೆಸಲಾಗಿದೆ~ ಎಂದರು.`ಕಾರ್ಯಕರ್ತೆಯರಿಗೆ ನಿಗದಿತ ವೇತನ ಮತ್ತು ಸಾರಿಗೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸಂಬಂಧ ಅಧಿಕಾರಿಗಳೊಂದಿಗೆ ಮನವಿ ಪತ್ರ ನೀಡಲಾಗಿದ್ದು, ಸಕಾರತ್ಮಾಕವಾಗಿ ಪ್ರತಿಕ್ರಿಯೆ ದೊರೆತಿದೆ. ಆಸ್ಪತ್ರೆಯಲ್ಲಿ ಕಾರ್ಯಕರ್ತೆಯರು ಸಿಬ್ಬಂದಿಯಿಂದ ಎದುರಿಸುತ್ತಿರುವ ಕಿರುಕುಳದ ಬಗ್ಗೆ ಈಗಾಗಲೇ ಸಂಬಂಧಪಟ್ಟವರಿಗೆ ದೂರು ನೀಡಲಾಗಿದೆ~  ಎಂದರು. ಸಂಘದ ಅಧ್ಯಕ್ಷೆ ಎಸ್.ವರಲಕ್ಷ್ಮಿ, ಪ್ರಧಾನ ಕಾರ್ಯದರ್ಶಿ ಮಾಲಿನಿ ಮೇಸ್ತ ಇತರರು ಉಪಸ್ಥಿತರಿದ್ದರು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry