ಶುಕ್ರವಾರ, ಮೇ 14, 2021
31 °C

ಉದ್ಯೋಗ ಮೇಳಕ್ಕೆ ಇಂದು ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಟಿ.ಜಾನ್ ತಾಂತ್ರಿಕ ಸಂಸ್ಥೆಯು ಗ್ರಿಡ್ (ಗ್ಲೋಬಲ್  ರಿಸರ್ಚ್ ಇನ್ನೋವೇಷನ್ ಅಂಡ್  ರಿಸರ್ಚ್)ನ ಸಹಯೋಗದಲ್ಲಿ  ನಗರದ ಬನ್ನೇರಘಟ್ಟ ರಸ್ತೆಯಲ್ಲಿರುವ ಸಂಸ್ಥೆಯ ಆವರಣದಲ್ಲಿ ಶನಿವಾರ ಮತ್ತು ಭಾನುವಾರ  ಅಂತಿಮ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ತಯಾರಿಸಿರುವ ವಿವಿಧ ಮಾದರಿಗಳ ಪ್ರದರ್ಶನ ಹಾಗೂ ಉದ್ಯೋಗ ಮೇಳ ಹಮ್ಮಿಕೊಂಡಿದೆ.



ಈ ಕುರಿತು ಸಂಸ್ಥೆಯ ಪ್ರಾಚಾರ್ಯ ಡಾ.ಎಸ್.ಪದ್ಮನಾಭ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಇರುವ ಪ್ರತಿಭೆಯನ್ನು ಬೆಳಕಿಗೆ ತರಲು ಮತ್ತು ಉದ್ಯೋಗಾವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಭಾನುವಾರ ಬೆಳಿಗ್ಗೆ 9ಕ್ಕೆ ಮಾಹಿತಿ ತಂತ್ರಜ್ಞಾನ ಸಚಿವ ಎಸ್.ಆರ್. ಪಾಟೀಲ ಮೇಳವನ್ನು ಉದ್ಘಾಟಿಸುವರು ಎಂದು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.