ಉದ್ಯೋಗ ಮೇಳ

7

ಉದ್ಯೋಗ ಮೇಳ

Published:
Updated:

ಬೆಂಗಳೂರು: ಗಾಂಧಿನಗರದ ಶಾಸಕ ದಿನೇಶ್ ಗುಂಡೂರಾವ್ ಅವರು ಇದೇ 10ರಂದು ಉದ್ಯೋಗ ಮೇಳ ಆಯೋಜಿಸಲಿದ್ದಾರೆ. ಶೇಷಾದ್ರಿಪುರದ `ಆರ್. ಗುಂಡೂರಾವ್ ಕ್ರೀಡಾ ಸಂಕೀರ್ಣ~ದಲ್ಲಿ ನಡೆಯಲಿರುವ ಉದ್ಯೋಗ ಮೇಳದಲ್ಲಿ 50ಕ್ಕೂ ಹೆಚ್ಚಿನ ಕಂಪೆನಿಗಳು ಭಾಗವಹಿಸುವ ನಿರೀಕ್ಷೆ ಇದೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಜೆಒಸಿ, ಡಿಪ್ಲೊಮಾ ಮತ್ತು ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಮೇಳದಲ್ಲಿ ಭಾಗವಹಿಸಬಹುದು ಎಂದು ದಿನೇಶ್ ಗುಂಡೂರಾವ್  ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.`ಕನಿಷ್ಠ ಮೂರು ಸಾವಿರ ಅಭ್ಯರ್ಥಿಗಳಿಗೆ ಉದ್ಯೋಗ ಸಿಗುವಂತಾಗಬೇಕು ಎಂಬ ಗುರಿ ಇರಿಸಿಕೊಳ್ಳಲಾಗಿದೆ. ಮೇಳ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5ರವರೆಗೆ ನಡೆಯಲಿದೆ~ ಎಂದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry