ಮಂಗಳವಾರ, ಏಪ್ರಿಲ್ 13, 2021
30 °C

ಉದ್ಯೋಗ ಮೇಳ: 180 ಮಂದಿಗೆ ನೌಕರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಳವಳ್ಳಿ: ಎಲ್ಲ ಕ್ಷೇತ್ರಗಳಲ್ಲು ಪುರುಷರಿಗೆ ಸರಿಸಮನಾಗಿ ಮಹಿಳೆಯರು ಉದ್ಯೋಗ ಮಾಡುತ್ತಿದ್ದು, ಲಭ್ಯವಿರುವ ಉದ್ಯೋಗ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಪಟ್ಟಣದ ಸರ್ಕಾರಿ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲ ರಾಚಯ್ಯ ತಿಳಿಸಿದರು.ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಮಾನವ ಸಂಪನ್ಮೂಲ ಅಭಿವೃದ್ದಿ ಕೇಂದ್ರ ಇವರ ಆಶ್ರಯದಲ್ಲಿ ನಡೆದ ತಾಲ್ಲೂಕಿನಲ್ಲಿ ನಡೆದ ಪ್ರಥಮ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದರು.ಜಿಲ್ಲಾ ಉದ್ಯೋಗಾಧಿಕಾರಿ ಡಿ.ಎಂ.ರಾಣಿ ಮಾತನಾಡಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಕಂಪ್ಯೂಟರ್ ತರಬೇತಿ ನೀಡಲಾಗುತ್ತಿದ್ದು, ಅವಶ್ಯವಿರುವವರು ತಮ್ಮ ವಿವರಗಳನ್ನು ಕಚೇರಿಗೆ ನೀಡಿದರೆ ತರಬೇತಿ ನೀಡಲಾಗುವುದು. ಈ ಮೇಳದಲ್ಲಿ ಉದ್ಯೋಗ ದೊರೆಯದಿದ್ದರೆ ಪ್ರತಿ ಶುಕ್ರವಾರ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಸಂದರ್ಶನ ವ್ಯವಸ್ಥೆ ಮಾಡಲಾಗಿದೆ. ಅಲ್ಲಿ ಬಂದು ಸಂದರ್ಶನಕ್ಕೆ ಹಾಜರಾಗುವಂತೆ ಮನವಿ ಮಾಡಿದರು.ಸಹಾಯಕ ಉದ್ಯೋಗಾಧಿಕಾರಿ ಕೆ.ಶಿವಮೂರ್ತಿ, ರಘುನಂದನ್ ಇತರರು ಭಾಗವಹಿಸಿದ್ದು ಪ್ರೇಮಕುಮಾರಿ ಪ್ರಾರ್ಥಿಸಿದರು.ಈ ಮೇಳದಲ್ಲಿ 15 ಕಂಪೆನಿಗಳು ಭಾಗವಹಿಸಿದ್ದು, 412 ಆಕಾಂಕ್ಷಿಗಳು ಭಾಗವಹಿಸಿದ್ದರು. 202 ಮಂದಿ ನೋಂದಣಿ ಮಾಡಿಸಿದ್ದು, ಅವರಲ್ಲಿ 180 ಮಂದಿಗೆ ಉದ್ಯೋಗ ಅವಕಾಶ ಲಭಿಸುತ್ತದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಡಿ.ಎಂ.ರಾಣಿ ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.