ಉನ್ನತ ಮಟ್ಟದ ತನಿಖೆಗೆ ಆಗ್ರಹ: ರಸ್ತೆ ತಡೆ

7
ಅಧಿಕಾರಿ ಮೇಲಿನ ಹಲ್ಲೆ ಪ್ರಕರಣ

ಉನ್ನತ ಮಟ್ಟದ ತನಿಖೆಗೆ ಆಗ್ರಹ: ರಸ್ತೆ ತಡೆ

Published:
Updated:

ಚಾಮರಾಜನಗರ: ಜಿಲ್ಲಾ ಜಲಾ ನಯನ ಇಲಾಖೆ ಸಹಾಯಕ ನಿರ್ದೇಶಕ ಹುಚ್ಚಯ್ಯ ಅವರ ಮೇಲಿನ ಹಲ್ಲೆ ಪ್ರಕರಣ ಕುರಿತು ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿ ದಲಿತ ಪ್ರಗತಿ ಪರ ಸಂಘಟನೆಗಳ ಒಕ್ಕೂಟ ಭುವನೇಶ್ವರಿ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿತು.ಪ್ರಮುಖ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು. ಉದ್ಯೋಗ ಖಾತ್ರಿ ಯೋಜನೆ ಅನುಷ್ಟಾನ ಹಾಗೂ ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿದ್ದು, ಇದರಲ್ಲಿ ಕೆಲ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಭಾಗಿ ಯಾಗಿದ್ದಾರೆ ಎಂದು ಆಪಾದಿಸಿದರು.ಪ್ರತಿಭಟನೆಯಲ್ಲಿ ಸಿ.ಎಂ. ಕೃಷ್ಣ ಮೂರ್ತಿ, ದೊಡ್ಡಿಂದುವಾಡಿ ಕೆ.ಸಿದ್ದ ಾಜು, ನಾರಾಯಣ, ಮಾಡ್ರಳ್ಳಿ ಸುಭಾಷ್, ಸಿ.ಎನ್.ಗೋವಿಂದರಾಜು, ಮಹೇಶ್, ಇತರರು ಭಾಗವಹಿಸಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry