ಶಿಕ್ಷಣ ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆಗಳಿಗೆ ಸರಿಹೊಂದುವಂತೆ ಶಿಕ್ಷಕರು ತಮ್ಮ ಜ್ಞಾನ, ವೃತ್ತಿ ಕೌಶಲಗಳನ್ನು ಹೆಚ್ಚಿಸಿಕೊಳ್ಳುವ ಅಗತ್ಯವಿದೆ. ಇದಕ್ಕಾಗಿ ನಮ್ಮ ಸರ್ಕಾರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪದವಿ ಅಧ್ಯಯನ ಮತ್ತು ಪದವಿಪೂರ್ವ ಕಾಲೇಜು ಉಪನ್ಯಾಸಕರಿಗೆ ಬಿ.ಎಡ್. ಮಾಡಿಕೊಳ್ಳಲು ವೇತನ ಸಹಿತ ಅವಕಾಶ ನೀಡಿರುವುದು ಸಂತೋಷ.

ಆದರೆ ಈ ವಿಷಯದಲ್ಲಿ ಪ್ರೌಢಶಾಲಾ ಶಿಕ್ಷಕರೇನು ಅನ್ಯಾಯ ಮಾಡಿದ್ದಾರೆ? 15 ವರ್ಷ ಮತ್ತು ಅದಕ್ಕಿಂತಲೂ ಹೆಚ್ಚು ವರ್ಷ ಸೇವೆ ಸಲ್ಲಿಸಿರುವ ಬಹಳಷ್ಟು ಪ್ರೌಢಶಾಲಾ ಶಿಕ್ಷಕರು ಸ್ನಾತಕೋತ್ತರ ಪದವಿ ಹೊಂದಿಲ್ಲ. ಇಂತಹವರಿಗೂ ವ್ಯಾಸಂಗಕ್ಕೆ ವೇತನ ಸಹಿತವಾದ ಅವಕಾಶ ಮಾಡಿಕೊಟ್ಟಲ್ಲಿ ಅನುಕೂಲವಾಗುತ್ತದೆ. ಪ್ರಾಥಮಿಕ ಶಾಲಾ ಶಿಕ್ಷಕರ ಸಂಖ್ಯೆಗೆ ಹೋಲಿಸಿದರೆ ಪ್ರೌಢಶಾಲಾ ಶಿಕ್ಷಕರ ಸಂಖ್ಯೆ ಕಡಿಮೆ. ಸರ್ಕಾರ ಈ ಬಗ್ಗೆ ಯೋಚಿಸಲಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.