ಮೈಸೂರು: ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ವತಿಯಿಂದ ಹುಣಸೂರು ರಸ್ತೆಯ ತಾಲ್ಲೂಕು ಪಂಚಾಯಿತಿ ಸಭಾಂಗಣ ದಲ್ಲಿ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆ ಅಧಿಕಾರಿಗಳಿಗಾಗಿ ಮಂಗಳ ವಾರ ಹಮ್ಮಿಕೊಂಡಿದ್ದ ಉಪಗ್ರಹ ಆಧಾರಿತ ಕಾರ್ಯಾಗಾರ ಯಶಸ್ವಿಯಾಗಿ ಮುಕ್ತಾಯವಾಯಿತು.

ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ವರೆಗೆ ನಡೆದ ಕಾರ್ಯಾಗಾರದಲ್ಲಿ ಮೈಸೂರು ಜಿಲ್ಲೆಯ ಏಳು ತಾಲ್ಲೂಕಿನ ಗ್ರಾಮ ಪಂಚಾಯಿತಿ ಅಧ್ಯಕ್ಷರು, ತಾ.ಪಂ. ಹಾಗೂ ಜಿ.ಪಂ. ಸದಸ್ಯರು, ನೀರು ಬಳಕೆದಾರರ ಸಂಘದ ಅಧ್ಯಕ್ಷರು, ಮಹಿಳಾ ಸ್ವಸಹಾಯ ಸಂಘಗಳ ಅಧ್ಯಕ್ಷರು ಭಾಗವಹಿಸಿದ್ದರು. ಬೆಂಗಳೂರಿನ ಇಂಧನ ಅಭಿವೃದ್ಧಿ ಮಂಡಳಿಯ ಕಾರ್ಯಕಾರಿ ಅಧ್ಯಕ್ಷ ವೈ.ಬಿ. ರಾಮಕೃಷ್ಣ ಅವರು `ಬರಡು ಬಂಗಾರ~, `ಹಸಿರು ಹೊನ್ನು~ ಹಾಗೂ `ಸುವರ್ಣ ಭೂಮಿ~ ಯೋಜನೆಯಡಿ ಹೊಂಗೆ, ಸಿಮರೂಬ, ಬೇವು, ಹಿಪ್ಪೆ ಹಾಗೂ ಜತ್ರೋಫ ಸಸಿ ನೆಡುವ ಬಗ್ಗೆ ಮಾಹಿತಿ ನೀಡಿದರು.

ಮಧ್ಯಾಹ್ನ 1 ರಿಂದ ಸಂಜೆ 4 ಗಂಟೆ ವರೆಗೆ ಚುನಾಯಿತ ಜನಪ್ರತಿನಿಧಿಗಳು, ತೋಟಗಾರಿಕೆ, ಕೃಷಿ ಹಾಗೂ ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕರಿಗೆ ಮಾಹಿತಿ ನೀಡಲಾಯಿತು. 70ಕ್ಕೂ ಹೆಚ್ಚು ಜನ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.

ಕಾರ್ಯಕ್ರಮ ಸಂಯೋಜಕ ಮುರ್ತೋಜಾ ಅಲಿ, ಡೀಡ್ ಲೀಡ್ ಎನ್ಜಿಒದ ಜಗದೀಶ್, ತಾಲ್ಲೂಕು ಸಂಯೋಜಕ ಮಹೇಂದ್ರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.