ಉಪಚುನಾವಣೆ: ಕಾಂಗ್ರೆಸ್‌ನಿಂದ ಉಸ್ತುವಾರಿ ಸಮಿತಿ ನೇಮಕ

7

ಉಪಚುನಾವಣೆ: ಕಾಂಗ್ರೆಸ್‌ನಿಂದ ಉಸ್ತುವಾರಿ ಸಮಿತಿ ನೇಮಕ

Published:
Updated:

ಬೆಂಗಳೂರು: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಉಸ್ತುವಾರಿಗಾಗಿ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿದೆ.

ಲೋಕಸಭಾ ಕ್ಷೇತ್ರದ ಎಲ್ಲ ವಿಧಾನಸಭಾ ಕ್ಷೇತ್ರಗಳ ಉಸ್ತುವಾರಿಯನ್ನೂ ಹಂಚಿಕೆ ಮಾಡಲಾಗಿದೆ. ಆಸ್ಕರ್ ಫರ್ನಾಂಡಿಸ್ ಅವರಿಗೆ ಚುನಾವಣಾ ಸಿದ್ಧತೆಯ ಪೂರ್ಣ ಜವಾಬ್ದಾರಿ ವಹಿಸಲಾಗಿದೆ. ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸಮಿತಿಯ ಸದಸ್ಯರ ವಿವರವನ್ನು ಬಿಡುಗಡೆ ಮಾಡಿದರು.

ವಿಧಾನಸಭಾ ಕ್ಷೇತ್ರವಾರು ಉಸ್ತುವಾರಿ ವಿವರ: ಉಡುಪಿ- ಮಾಜಿ ಸಚಿವ ಎಚ್.ಕೆ.ಪಾಟೀಲ್ ಮತ್ತು ಸಂಸದ ಎಚ್.ವಿಶ್ವನಾಥ್; ಕುಂದಾಪುರ- ಮಾಜಿ ಸಚಿವ ಆರ್.ವಿ.ದೇಶಪಾಂಡೆ ಮತ್ತು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕಿ ಮೋಟಮ್ಮ, ಕಾಪು- ರಾಜ್ಯಸಭೆಯ ಉಪ ಸಭಾಪತಿ ಕೆ.ರೆಹಮಾನ್ ಖಾನ್; ಕಾರ್ಕಳ- ಕೇಂದ್ರ ಕಾರ್ಪೋರೆಟ್ ವ್ಯವಹಾರಗಳ ಸಚಿವ ಎಂ.ವೀರಪ್ಪ ಮೊಯಿಲಿ; ಮೂಡಿಗೆರೆ- ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ; ಚಿಕ್ಕಮಗಳೂರು- ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ; ಶೃಂಗೇರಿ- ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ; ತರೀಕೆರೆ- ರೈಲ್ವೆ ಖಾತೆ ರಾಜ್ಯ ಸಚಿವ ಕೆ.ಎಚ್.ಮುನಿಯಪ್ಪ ಮತ್ತು ಶಾಸಕ ಡಿ.ಕೆ.ಶಿವಕುಮಾರ್.ಪರಮೇಶ್ವರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮುಖಂಡರಾದ ಜಾಫರ್ ಷರೀಫ್ ಮತ್ತು ಸಿ.ಎಂ.ಇಬ್ರಾಹಿಂ ಪ್ರಚಾರದ ವೇಳೆ ಪ್ರಮುಖ ಭಾಷಣಕಾರರಾಗಿ ಭಾಗವಹಿಸುತ್ತಾರೆ. ಉಸ್ತುವಾರಿ ವಹಿಸಿರುವವರು ತಮ್ಮ ಆಯ್ಕೆಯ ಕಾರ್ಯಕರ್ತರನ್ನು ಬಳಸಿಕೊಳ್ಳಲು ಅವಕಾಶವಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry