ಬುಧವಾರ, ಮಾರ್ಚ್ 3, 2021
23 °C

ಉಪನಗರ ರೈಲು: ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಪನಗರ ರೈಲು: ಮನವಿ

ಬೆಂಗಳೂರು: ಮುಂದಿನ ತಿಂಗಳು ಮಂಡಿಸಲಿರುವ ಬಜೆಟ್‌ನಲ್ಲಿ ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ ಆದ್ಯತೆ ನೀಡಬೇಕು ಎಂದು ಕೇಂದ್ರ ರಸಗೊಬ್ಬರ ಸಚಿವ ಅನಂತಕುಮಾರ್‌ ರೈಲ್ವೆ ಸಚಿವ ಸುರೇಶ್‌ಪ್ರಭು ಅವರಿಗೆ ಮನವಿ ಮಾಡಿದರು.ನವದೆಹಲಿಯ ರೈಲ್ವೆ ಭವನದಲ್ಲಿ ಸಚಿವರನ್ನು ಭೇಟಿ ಮಾಡಿದ ಅನಂತಕುಮಾರ್‌, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದ ಪತ್ರವನ್ನೂ ಹಸ್ತಾಂತರಿಸಿದರು.‘ಐಟಿ, ಬಿಟಿ ಉದ್ಯಮದ ಬೆಳವಣಿಗೆಯಿಂದ ಸಂಚಾರದ ಒತ್ತಡವೂ ಹೆಚ್ಚಾಗಿದೆ. ವೈಟ್‌ಫೀಲ್ಡ್‌ ಮತ್ತು ಹೊರವರ್ತುಲ ರಸ್ತೆ ಸುತ್ತಲಿನ ಪ್ರದೇಶಗಳಿಗೆ ತೆರಳಲು ಪ್ರಯಾಣದ ಅವಧಿ ಹೆಚ್ಚಿದ್ದರಿಂದ ಉತ್ಪಾದನೆಯಲ್ಲಿ ಕುಂಠಿತವಾಗಿದೆ. ಹೀಗಾಗಿ ಉಪನಗರ ರೈಲ್ವೆ ಯೋಜನೆ ಆರಂಭಿಸಬೇಕು’ ಎಂದು ಕೇಳಿಕೊಂಡರು.ರೈಲ್ವೆ ಮಂಡಳಿ ಅಧ್ಯಕ್ಷ ಎ.ಕೆ. ಮಿತ್ತಲ್‌ ಹಾಗೂ ಇತರ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.