ಭಾನುವಾರ, ಜೂನ್ 20, 2021
28 °C

ಉಪಪ್ರಧಾನಿ ಸ್ಥಾನದ ಹಂಬಲವಿಲ್ಲ:ಜೇಟ್ಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಎನ್‌ಡಿಎ ಅಧಿಕಾರಕ್ಕೆ ಬಂದರೆ ಅರುಣ್‌ ಜೇಟ್ಲಿ ಅವರು ಉಪ ಪ್ರಧಾನಿಯಾಗಲಿದ್ದಾರೆ ಎಂಬ ಪಂಜಾಬ್‌ ಮುಖ್ಯಮಂತ್ರಿ ಪ್ರಕಾಶ್‌ ಸಿಂಗ್‌ ಬಾದಲ್‌ ಅವರ ಹೇಳಿಕೆಗೆ ಹೆಚ್ಚು ಮಹತ್ವ ನೀಡದ ಜೇಟ್ಲಿ, ತಾನು ಯಾವುದೇ ಸ್ಥಾನವನ್ನು ನಿರೀಕ್ಷಿಸುತ್ತಿಲ್ಲ ಎಂದು ಹೇಳಿದ್ದಾರೆ.‘ಪ್ರಚಾರದ ಸಂದರ್ಭದಲ್ಲಿ ಈ ಹೇಳಿಕೆಗಳನ್ನು ನೀಡಲಾಗಿದೆ. ನಾನು ಯಾವುದೇ ಮಹತ್ವದ ಸ್ಥಾನಗಳನ್ನು ನಿರೀಕ್ಷಿಸುತ್ತಿಲ್ಲ ಎಂಬ ಭರವಸೆ ನೀಡುತ್ತೇನೆ’ ಎಂದು ಜೇಟ್ಲಿ ಹೇಳಿದ್ದಾರೆ.ಅಮೃತಸರದಲ್ಲಿ ಶುಕ್ರವಾರ ನಡೆದ ಸಾರ್ವಜನಿಕ ರ್‍್ಯಾಲಿ ಉದ್ದೇಶಿಸಿ ಮಾತನಾಡುತ್ತಿದ್ದ ಬಾದಲ್‌, ‘ಒಂದು ವೇಳೆ ನೀವು ನಮ್ಮನ್ನು ಅಧಿಕಾರಕ್ಕೆ ತಂದರೆ, ಅವರು (ಜೇಟ್ಲಿ) ಉಪ ಪ್ರಧಾನಿ ಅಥವಾ ಹಣಕಾಸು ಸಚಿವ­ರಾಗಲಿದ್ದಾರೆ’ ಎಂದಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.