ಮಂಗಳವಾರ, ಮೇ 11, 2021
20 °C

ಉಪಲೋಕಾಯುಕ್ತರ ನೇಮಕಾತಿ ಅನೂರ್ಜಿತ- ಸರ್ಕಾರಕ್ಕೆ ಹಿನ್ನಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು (ಐಎಎನ್‌ಎಸ್): ಉಪಲೋಕಾಯುಕ್ತರಾಗಿ ಸರ್ಕಾರ ನೇಮಿಸಿದ್ದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಚಂದ್ರಶೇಖರಯ್ಯ ಅವರ ನೇಮಕಾತಿಯನ್ನು ಹೈಕೋರ್ಟ್ ಮಂಗಳವಾರ ರದ್ದುಪಡಿಸುವ ಮೂಲಕ ಸರ್ಕಾರಕ್ಕೆ ಚಾಟಿ ಬೀಸಿದೆ.ನ್ಯಾಯಮೂರ್ತಿಗಳಾದ ಎನ್.ಕುಮಾರ್ ಹಾಗೂ ಎಚ್.ಎಸ್. ಕೆಂಪಣ್ಣ ಅವರಿದ್ದ ನ್ಯಾಯಪೀಠವು ಮಂಗಳವಾರ ಈ ಆದೇಶ ಹೊರಡಿಸಿದೆ.ಉಪಲೋಕಾಯುಕ್ತರ ನೇಮಕಾತಿ ಸಂದರ್ಭದಲ್ಲಿ ಸರ್ಕಾರವು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಸಂಪರ್ಕಿಸಿಲ್ಲ ಎಂಬ ಕಾರಣ ನೀಡಿ ನ್ಯಾಯಪೀಠವು ನೇಮಕಾತಿಯನ್ನು ಅನೂರ್ಜಿತಗೊಳಿಸಿದೆ.ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡ ತರುವಾಯ ಡಿ.ವಿ. ಸದಾನಂದಗೌಡ ಅವರು ನಿವೃತ್ತ ನ್ಯಾಯಮೂರ್ತಿ ಚಂದ್ರಶೇಖರಯ್ಯ ಅವರನ್ನು ಉಪಲೋಕಾಯುಕ್ತರಾಗಿ ನೇಮಕ ಮಾಡಿದ್ದರು. ಈ ನೇಮಕಾತಿಯ ವಿರುದ್ಧ ಬೆಂಗಳೂರು ಮೂಲದ ಎಂ. ಆನಂದ ಹಾಗೂ ಜೆ.ಸಿ. ಕೃಷ್ಣ ಎಂಬ ವಕೀಲರು ಹೈಕೋರ್ಟ್ ಮೆಟ್ಟಿಲೇರಿದ್ದರು.ಇವರ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠ ಇಡೀ ನೇಮಕಾತಿಯನ್ನೇ ಅನೂರ್ಜಿತಗೊಳಿಸಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.